ಜಮ್ಮು : ಜಮ್ಮು – ಕಾಶ್ಮೀರದ ವಿಧಾನಸಭೆ ಪಡಸಾಲೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಅವಘಡದಿಂದ ವಿಧಾನಸಭೆಯಲ್ಲಿದ್ದ ಪೀಠೋಪಕರಣಗಳು ಹಾಗೂ ಅಲ್ಲೇ ಇದ್ದ ಕೆಲವು ಫೋಟೋಗಳಿಗೂ ಬೆಂಕಿ ತಗುಲಿಕೊಂಡಿದೆ.
ಆದರೆ ಅದೃಷ್ಟವಶಾತ್ ಯಾರಿಗೂ ಏನೂ ಹಾನಿಯಾಗಿಲ್ಲವೆಂದು ಅಲ್ಲಿನ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ.
ಇಂದು ಬೆಳಗ್ಗೆ 09.34ರ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೆಲವೇ ನಿಮಿಷದಲ್ಲಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದ್ದು, ಅವಘಡಕ್ಕೆ ಸ್ಪಷ್ಟ ಕಾರಣ ತಿಳಿಯಲು ಓರ್ವ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.




