Ad imageAd image

ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ : ತೆಲಂಗಾಣ ಹೈಕೋರ್ಟ್ ನಿಂದ ಜಾಮೀನು ಮಂಜೂರು

Bharath Vaibhav
ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ : ತೆಲಂಗಾಣ ಹೈಕೋರ್ಟ್ ನಿಂದ ಜಾಮೀನು ಮಂಜೂರು
Janradhan reddy
WhatsApp Group Join Now
Telegram Group Join Now

ಬೆಂಗಳೂರು : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ತೆಲಂಗಾಣ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಹಾಗೂ ಸಿಬಿಐ ಕೋರ್ಟ್ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿ ತೆಲಂಗಾಣ ಹೈಕೋರ್ಟ್ ಆದೇಶ ಹೊರಡಿಸಿದೆ.

ಆದರೆ ಭಾರತವನ್ನು ತೊರೆಯುವಂತಿಲ್ಲ ಎಂದು ಆದೇಶ ಹೊರಡಿಸಿದ ಕೋರ್ಟ್ ಪಾಸ್ ಪೋರ್ಟ್ ವಶಕ್ಕೆ ನೀಡುವಂತೆ ಸೂಚಿಸಿದೆ. ಹಾಗೂ 10 ಲಕ್ಷ ರೂಗಳ 2 ಶ್ಯೂರಿಟಿ ನೀಡಬೇಕು ಎಂದು ಕೋರ್ಟ್ ಆದೇಶ ಹೊರಡಿಸಿದೆ.

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಅಪರಾಧಿ ಎಂದು ಹೈದರಾಬಾದ್ ಸಿಬಿಐ ಕೋರ್ಟ್ ಇತ್ತೀಚೆಗೆ ತೀರ್ಪು ಪ್ರಕಟಿಸಿದ್ದು, ಶಿಕ್ಷೆ ಪ್ರಮಾಣ ಪ್ರಕಟಿಸಿತ್ತು.

ಓಬಳಾಪುರಂ ಮೈನಿಂಗ್ ಕೇಸ್ ನಲ್ಲಿ ಗಾಲಿ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ನ್ಯಾಯಾಲಯ ಆದೇಶ ಹೊರಡಿಸಿತ್ತು.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಡಳಿತದ ಅವಧಿಯಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಪ್ರಕರಣ ಇದಾಗಿದ್ದು, ಆಂಧ್ರ ಮತ್ತು ಕರ್ನಾಟಕದ ಗಡಿ ಭಾಗದ ಓಬಳಾಪುರಂ ಪ್ರದೇಶದ ಅದಿರಿನ ಅಕ್ರಮ ಗಣಿಕಾರಿಕೆಗೆ ಸಂಬಂಧಿಸಿದಂತೆ ಜನಾರ್ಧನ ರೆಡ್ಡಿ ಅಪರಾಧಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದ್ದು, 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಜನಾರ್ಧನ ರೆಡ್ದಿ ಈ ಕಂಪನಿಯ ಮುಖ್ಯಸ್ಥರಾಗಿದ್ದರು. ಶ್ರೀನಿವಾಸರೆಡ್ಡಿ ಒಎಂಸಿ ಕಂಪನಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಈ ಕಂಪನಿಗೆ ಗಣಿಗಾರಿಕೆ ಮಂಜೂರಾತಿ ನೀಡುವಲ್ಲಿ ಅರಣ್ಯ ಇಲಾಖೆ, ಗಣಿ ಇಲಾಖೆಯಿಂದ ಅಕ್ರಮ ನಡೆದಿತ್ತು.

ಜನಾರ್ರ್ಧನ ರೆಡ್ಡಿ ವಿರುದ್ಧ 29 ಲಕ್ಷ ಟನ್ ಅದಿರು ಲೂಟಿ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಸೇರಿದಂತೆ ಒಟ್ಟು 5 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟವಾಗಿ ತ್ತು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!