Ad imageAd image

ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸುವ ಸಂದರ್ಭದಲ್ಲಿ ಜಾರಕಿಹೊಳಿ ಕುಟುಂಬಸ್ಥರ ಉಪಸ್ಥಿತಿ.

Bharath Vaibhav
ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸುವ ಸಂದರ್ಭದಲ್ಲಿ ಜಾರಕಿಹೊಳಿ ಕುಟುಂಬಸ್ಥರ ಉಪಸ್ಥಿತಿ.
WhatsApp Group Join Now
Telegram Group Join Now

ಬೆಳಗಾವಿ : ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಜಾರಕಹೊಳಿಯವರು ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸ್ಮರಣಾರ್ಥವಾಗಿ, ಬೆಳಗಾವಿಯ ಸುವರ್ಣ ಸೌಧದಲ್ಲಿ ರಾಷ್ಟ್ರಪಿತ ಗಾಂಧಿಯವರ ಪ್ರತಿಮೆಯನ್ನು ಎಐಸಿಸಿ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಮತ್ತು ಶ್ರೀಮತಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ.ಶಿವಕುಮಾರ್, ಸಭಾಧ್ಯಕ್ಷರಾದ ಶ್ರೀ ಯು.ಟಿ.ಖಾದರ್, ಸಭಾಪತಿಗಳಾದ ಶ್ರೀ ಬಸವರಾಜ್ ಹೊರಟ್ಟಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಣದೀಪಸಿಂಗ್ ಸುರ್ಜೆವಾಲಾ, ಶ್ರೀ ಕೆ. ಸಿ. ವೇಣುಗೋಪಾಲ್, ಸಚಿವರುಗಳಾದ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ. ಶ್ರೀ ಎಚ್.ಕೆ.ಪಾಟೀಲ, ಡಾ.ಜಿ.ಪರಮೇಶ್ವರ , ಉಪಸಭಾಧ್ಯಕ್ಷ ಶ್ರೀ ರುದ್ರಪ್ಪ ಲಮಾಣಿ, ಸಂಪುಟ ಸಹೋದ್ಯೋಗಿಗಳು, ಸಂಸದರು, ಶಾಸಕರು ಹಾಗೂ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ರೈತರು ಉಪಸ್ಥಿತರಿದ್ದರು.

ವರದಿ : ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!