ಬೆಂಗಳೂರು : ಒಲಿಂಪಿಕ್ಸ್ ಪದಕ ವಿಜೇತ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ ಅವರು ಇಂದು ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಿದ್ದಾರೆ.
ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವಶ್ರೇಷ್ಠ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಸೌಹಾರ್ದಯುತವಾಗಿ ಭೇಟಿ ಮಾಡಿದರು.
ಈ ವೇಳೆ ನೀರಜ್ ಚೋಪ್ರಾ ಅವರ ಕ್ರೀಡಾ ಬದುಕು ಮತ್ತಷ್ಟು ಯಶಸ್ಸಿನಿಂದ ಕೂಡಿರಲಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು.
ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು, ವಿಧಾನ ಪರಿಷತ್ ಸದಸ್ಯರು ಆದ ಗೋವಿಂದರಾಜು ಅವರು ಈ ವೇಳೆ ಉಪಸ್ಥಿತರಿದ್ದರು.




