ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ಬೆಳ್ಳಂ ಬೆಳಿಗ್ಗೆ ಪಟ್ಟಣದಲ್ಲಿ ಜೆಸಿಬಿ ಘರ್ಜಿಸಿದ್ದು, ಫುಟ್ ಪಾತ್ ಒತ್ತುವರಿ ತೆರವು ಮಾಡಲಾಗಿದೆ.
ಪಟ್ಟಣದ ಬಸ್ ನಿಲ್ದಾಣದ ಮುಂದೆ ಮೊಹರೆ ವೃತ್ತದ ವರೆಗೆ ಫುಟ್ ಪಾತ್ ಮೇಲೆ ಅಂಗಡಿ ಮಳಿಗೆಗಳ ನಿರ್ಮಾಣ ಮಾಡಿಕೊಂಡು ವ್ಯಾಪಾರ ವಹಿವಾಟು ನಡೆಸಲಾಗುತ್ತಿತ್ತು.
ಇದರಿಂದ ಪಾದಚಾರಿಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆ ಫುಟ್ಪಾತ್ ತೆರವು ಮಾಡುವಂತೆ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಿತ್ತು ಹಾಗೂ ವಾಹನದ ಮೂಲಕ ಪ್ರಚಾರ ಪಡಿಸಲಾಗಿತ್ತು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಪ್ರೋಜ ಅಹಮದ ಪಟೇಲ ಸುದ್ದಿಗಾರರೊಂದಿಗೆ ಮಾತನಾಡಿ ತಿಳಿಸಿದರು.
ನೋಟಿಸ್ಗೂ ಬಗ್ಗದ ಅಂಗಡಿ ಮಾಲೀಕರಿಗೆ ಬೆಳ್ಳಂ ಬೆಳಿಗ್ಗೆ ಪಟ್ಟಣ ಪಂಚಾಯಿತಿ ಶಾಕ್ ನೀಡಿದ್ದು,
ಬೆಳಗ್ಗೆ ಜೆಸಿಬಿ ಮೂಲಕ ಅಧಿಕಾರಿಗಳೇ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಫುಟ್ಪಾತ್ ಒತ್ತುವರಿ ತೆರವು ಮಾಡಿ, ಸಾರ್ವಜನಿಕರ ಓಡಾಟಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ..
ವರದಿ:ಕೃಷ್ಣ ರಾಠೋಡ




