Ad imageAd image

ಜಿಲ್ಲೆ, ತಾಲೂಕು ಮಟ್ಟದಲ್ಲಿ ಜೆಡಿಎಸ್ ಸಮಾವೇಶಕ್ಕೆ ಸಿದ್ಧರಾಗಿ ಜೆಡಿಎಸ್ ಮುಖಂಡರಿಗೆ ಕರೆ:ಎಚ್.ಡಿ. ದೇವೇಗೌಡ

Bharath Vaibhav
ಜಿಲ್ಲೆ, ತಾಲೂಕು ಮಟ್ಟದಲ್ಲಿ ಜೆಡಿಎಸ್ ಸಮಾವೇಶಕ್ಕೆ ಸಿದ್ಧರಾಗಿ ಜೆಡಿಎಸ್ ಮುಖಂಡರಿಗೆ ಕರೆ:ಎಚ್.ಡಿ. ದೇವೇಗೌಡ
WhatsApp Group Join Now
Telegram Group Join Now

ಬೆಂಗಳೂರು: ಜಿಲ್ಲೆ, ತಾಲೂಕು ಮಟ್ಟದಲ್ಲಿ ಸಮಾವೇಶಗಳನ್ನು ಮಾಡಲು ಸಿದ್ಧರಾಗಬೇಕು.ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಗೆಲ್ಲುವ ಸಮರ್ಥ ಅಭ್ಯರ್ಥಿಗಳನ್ನು ಹುಡುಕಿ ಪಟ್ಟಿ ಮಾಡಿ ಕಣಕ್ಕೆ ಇಳಿಸೋಣ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಸೂಚಿಸಿದರು.

ಅವರು ನಗರದ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು ಸಭೆಯಲ್ಲಿ ಯಾರು ನನ್ನನ್ನು ರಾಷ್ಟ್ರೀಯ ಅಧ್ಯಕ್ಷ ಎಂದು ಕರೆಯಬೇಡಿ ನಾನು ಒಬ್ಬ ಜೆಡಿಎಸ್ ಕಾರ್ಯಕರ್ತ ಎಂದು ಕರಿಯಿರಿ.ತಾವುಗಳು ನನ್ನನ್ನೂ ಎಲ್ಲಿಗೆ ಬೇಕಾದರೂ ಕರಿಯಿರಿ ಬರುತ್ತೇನೆ ನಿಮ್ಮ ಜೊತೆಯಲ್ಲಿ ಹೋರಾಟ ಮಾಡುತ್ತೇನೆ ಎಂದು ಅವರು ಹೇಳಿದರು.

ಈ ಹಿಂದೆ ಇಪ್ಪತ್ತಮೂರು ಜಿಲ್ಲೆಗಳು ಇದ್ದವು ಪ್ರತಿ ಜಿಲ್ಲೆ, ತಾಲೂಕಿನಲ್ಲಿ ಪ್ರವಾಸ ಮಾಡಿದ್ದೇನೆ ,ಕಷ್ಟ ಪಟ್ಟು ಜೆಡಿಎಸ್ ಪಕ್ಷ ಕಟ್ಟಿದ್ದೇನೆ, ಈಗಲೂ ಓಡಾಟ ಮಾಡುತ್ತೇನೆ ಜೆಡಿಎಸ್ ಪಕ್ಷ ಕಟ್ಟೋದು ಸುಲಭದ ಕೆಲಸವಲ್ಲ ಹೀಗಾಗಿ ಯಾರೊಬ್ಬರೂ ಸಂಘಟನೆಯನ್ನು ಲಘುವಾಗಿ ತೆಗೆದು ಕೋಳ್ಳುವುದು. ಬೇಡ ಎಂದು ಮುಖಂಡರಿಗೆ ತಾಕೀತು ಮಾಡಿದರು.

ಯಾರು ಎದೇಗುಂದ ಬೇಕಾಗಿಲ್ಲ ಜೆಡಿಎಸ್ ಪಕ್ಷ ಗಟ್ಟಿಗೊಳಿಸುವ ಕೆಲಸ ಮಾಡೋಣ, ಸದಸ್ಯತ್ವ ನೋಂದಣಿಯನ್ನು ಎಲ್ಲಾ ಮುಖಂಡರು ಗಂಭೀರವಾಗಿ ಪರಿಗಣಿಸಬೇಕು ಸಂಘಟನೆಯ ಬಗ್ಗೆ ಅಸಡ್ಡೆ ಬೇಡ ಎಂದು ದೇವೇಗೌಡರು ಮುಖಂಡರಿಗೆ ಕಿವಿ ಮಾತು ಹೇಳಿದರು.

ಚುನಾವಣೆ ಹೊತ್ತಿನಲ್ಲಿ ಎಚ್ಚೆತ್ತು ಕೊಳ್ಳಬೇಡಿ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮಾತನಾಡಿ ಲೋಕಸಭೆ, ವಿಧಾನಸಭೆ ಅಥವಾ ಇನ್ನಾವುದೇ ಚುನಾವಣೆ ಬಂದಾಗ ಎಚ್ಚೆತ್ತರೆ ಉಪಯೋಗ ಇಲ್ಲ ಸಂಘಟನೆಗೆ ಶಕ್ತಿ ತುಂಬಿ ಜನರು ಜೊತೆಗೆ ಇದ್ದರೆ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಬಹುದು. ಇಲ್ಲವಾದರೆ ಶ್ರಮ ವ್ಯರ್ಥವಾಗುತ್ತದೆ ಎಂದು ಕುಮಾರಸ್ವಾಮಿ ಸಲಹೆ ನೀಡಿದರು.

ನಾಯಕನಾಗುವ ಕನಸು ಕಟ್ಟಿ ಕೊಂಡರೆ ಸಾಲದು ಅದಕ್ಕೆ ಮೂಲ ಬಂಡವಾಳ ಎಂದರೆ ಪಕ್ಷ ಸಂಘಟನೆ ನಿಮ್ಮ ಕ್ಷೇತ್ರ ಮತಗಟ್ಟೆ, ತಾಲೂಕು, ಜಿಲ್ಲಾ, ಕೇಂದ್ರ ಗಳಲ್ಲಿ ಸಂಘಟನೆಯನ್ನು ಬಲವಾಗಿ ಕಟ್ಟಿ , ಸದಸ್ಯತ್ವ ಅಭಿಯಾನವನ್ನು ವೇಗಯುತವಾಗಿ ನಡೆಸ ಬೇಕು ಯುವ ಜನರು , ರೈತರು, ಕೃಷಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಕ್ಕೆ ಸೇರ್ಪಡೆ ಆಗಬೇಕು ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರ ಸ್ವಾಮಿ ಮುಖಂಡರಿಗೆ ಮಾರ್ಗದರ್ಶನ ನೀಡಿದರು.

ವರದಿ : ಅಯ್ಯಣ್ಣ ಮಾಸ್ಟರ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!