ಬೆಂಗಳೂರು: ಯಶವಂತಪುರ : ಜೆಡಿಎಸ್ ಬಲವರ್ಧನೆ ಹಾಗೂ ಪಕ್ಷ ಸಂಘಟನೆ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಬೃಹತ್ ಸಮಾವೇಶ
ಹಮ್ಮಿಕೊಳ್ಳಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕ್ಷೇತ್ರ ಜೆಡಿಎಸ್ ಅಧ್ಯಕ್ಷ ಟಿ.ಎನ್ ಜವರಾಯಿಗೌಡ ತಿಳಿಸಿದರು.
ಕ್ಷೇತ್ರದ ತಾವರೆಕೆರೆಯಲ್ಲಿ ನಡೆದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತ ಸಭೆಯಲ್ಲಿ ಮಾತನಾಡಿದರು. ಜನರೊಂದಿಗೆ ಜನತಾದಳ ಘೋಷವಾಕ್ಯದೊಂದಿಗೆ ಜೆಡಿಎಸ್ ಯುವ ಜನತಾದಳ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ಸದಸ್ಯತ್ವ ನೊಂದಣಿ ಅಭಿಯಾನ ಅಭೂತಪೂರ್ವ ಯಶಸ್ಸು ಕಾಣುತ್ತಿದೆ. ಬೆಂಗಳೂರಿನ 28 ಕ್ಷೇತ್ರಗಳಲ್ಲಿ ಜೆಡಿಎಸ್ ಭದ್ರಕೋಟೆಯಾಗಿರುವ ಯಶವಂತಪುರ ಕ್ಷೇತ್ರದಲ್ಲಿ ನಾಲ್ಕು ಕಡೆ ಬೃಹತ್ ಸಮಾವೇಶಗಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.
ಸೆ.7 ರಂದು ತಾವರೆಕೆರೆಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು, ಜೆಡಿಎಸ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು
ಮನವಿ ಮಾಡಿದರು.
ನಾಲ್ಕು ವಿಧಾನಸಭಾ ಚುನಾವಣೆಗಳಲ್ಲೂ ಪರಾಭವಗೊಂಡರೂ ಜೆಡಿಎಸ್ ನಿಷ್ಠಾವಂತರ ಬೆಂಬಲದಿಂದ ಕ್ಷೇತ್ರದಲ್ಲಿ ಬಲವಾಗಿ ಬೇರೂರಿದ್ದೇನೆ. ಪಕ್ಷದ ಬಲವರ್ಧನೆಗೆ ಮುಖಂಡರು, ಕಾರ್ಯಕರ್ತರು ಶಕ್ತಿ ಮೀರಿ ಶ್ರಮಿಸಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ದೇವೇಗೌಡರು ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಕೈ ಬಲಪಡಿಸಿ ಎಂದು ಮನವಿ ಮಾಡಿದರು.
ಜೆಡಿಎಸ್ ಯುವ ಮುಖಂಡ ಸಂತೋಷ್ ಜವರಾಯಿಗೌಡ, ತಾವರೆಕೆರೆ ಹೋಬಳಿ ಜೆಡಿಎಸ್ ಅಧ್ಯಕ್ಷ ಶಂಕರೇಗೌಡ, ಕೆಂಗೇರಿ ತಾವರೆಕೆರೆ ಹೋಬಳಿ ಜೆಡಿಎಸ್ ಅಧ್ಯಕ್ಷ ಕೇಶವಮೂರ್ತಿ, ತಾವರೆಕೆರೆ ಗ್ರಾಪಂ ಮಾಜಿ ಅಧ್ಯಕ್ಷ ಮನೋಹರ್, ಯಶವಂತಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಧನಂಜಯ ಬಿ , ಮುಖಂಡರಾದ ಮಂಜುನಾಥ್ , ಚೇತನ್ ಗೌಡ,
ಮಾರೇಗೌಡ, ತಾರಾ ಲೋಕೇಶ್, ಕೋಟಿ ರಾಜಣ್ಣ,ಮುಂತಾದವರು ಇದ್ದರು.
ವರದಿ: ಅಯ್ಯಣ್ಣ ಮಾಸ್ಟರ್




