ಬಳ್ಳಾರಿ : ರಸಗೊಬ್ಬರ ಪೂರೈಕೆಯಲ್ಲಿ ರಾಜ್ಯ ಸರ್ಕಾರ ವಿಫಲ ಬಳ್ಳಾರಿ ನಗರದಲ್ಲಿ ಜೆಡಿಎಸ್ ಆರೋಪ, ಪ್ರತಿಭಟನೆ ಸಮರ್ಪಕ ರಸಗೊಬ್ಬರ ಪೂರೈಕೆ ಮಾಡದ ರಾಜ್ಯ ಸರ್ಕಾರದ ನಡೆ ಖಂಡಿಸಿ ಜೆಡಿಎಸ್ ಜಿಲ್ಲಾ ಘಟಕದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಬೆಳಿಗ್ಗೆ 12ಗಂಟೆಗೆ ಪ್ರತಿಭಟನೆ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಮೀನಹಳ್ಳಿ ತಾಯಣ್ಣ, ರಾಜ್ಯದಲ್ಲಿ ಕಳೆದ 2 ವರ್ಷಗಳಿಂದ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರ ಸಮಸ್ಯೆಗೆ ಮತ್ತು ಮಳೆ ಕೊರತೆಯಿಂದ ಭಾದಿತವಾದ ರೈತರ ಮತ್ತು ನೊಂದ ಸಂತ್ರಸ್ಥರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ರಾಜ್ಯದ ಕೃಷಿ ಇಲಾಖೆ ಕೇಳಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರ ಪೂರೈಕೆ ಮಾಡಿದ್ದರೂ ರೈತರಿಗೆ ರಸಗೊಬ್ಬರ ಸಮರ್ಪಕವಾಗಿ ವಿತರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈಗಾಗಲೇ ಮುಂಗಾರು ಹಂಗಾಮಿನ ಬೆಳೆದ ರೈತರು ಯೂರಿಯಾ ಮತ್ತು ಡಿಎಪಿ ಗೊಬ್ಬರಗಳಿಗಾಗಿ ಅಲೆದಾಡುವಂತಾಗಿದೆ ಎಂದು ಆರೋಪಿಸಿದರು.
ಮಳೆ ಮತ್ತು ನೆರೆ ಹಾವಳಿಯಿಂದ ಫಸಲು ನಷ್ಟಕ್ಕೆ ಮತ್ತು ಮಳೆ ಅಭಾವದಿಂದ ಹಾಳಾದ ಬೆಳೆ ನಷ್ಟಕ್ಕೆ ಸಂಬಂಧಿಸಿದ ಫಸಲು ವಿಮಾ ಕಂಪನಿಗಳಿಂದ ರೈತರಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ಸಂಪೂರ್ಣವಿಫಲವಾಗಿದೆ. ಈ ಎಲ್ಲಾ ವೈಫಲ್ಯಗಳಿಂದ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಲು ನೈತಿಕವಾಗಿ ಅಧಿಕಾರ ಕಳೆದುಕೊಂಡಿದೆ.
ಗೌರವಾನ್ವಿತ ರಾಜ್ಯಪಾಲರು, ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನವಿತ್ತು ಎಚ್ಚರಿಕೆ ನೀಡಿ, ರೈತರ ಸಮಸ್ಯೆ ಹಾಗೂ ನೆರೆ ಹಾವಳಿಯಿಂದ ನೊಂದ ಸಂತ್ರಸ್ತರಿಗೆ ಹಾಗೂ ಮಳೆ ಅಭಾವದಿಂದ ಫಸಲನ್ನು ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದಸೇರಿದಂತೆ ಇತರರಿದ್ದರು.




