ನವದೆಹಲಿ:ಹಸಿರು ಹೈಡೋಜನ್ ಸಂಶೋಧನೆ ಮತ್ತು ಅಭಿವೃದ್ಧಿನಿರತ ನವೋದ್ಯಮಗಳಿಗೆ ಕೇಂದ್ರ ಸರ್ಕಾರ ಒಟ್ಟಾರೆ 100 ಕೋಟಿ ರೂ. ಆರ್ಥಿಕ ನೆರವು ನೀಡಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಆಯೋಜಿಸಿದ್ದ ಮೊದಲ ವಾರ್ಷಿಕ ಹಸಿರು ಹೈಡೋಜನ್ ಸಂಶೋಧನೆ ಮತ್ತು ಅಭಿವೃದ್ಧಿ ಸಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಹಸಿರು ಹೈಡೋಜನ್ ನಾವೀನ್ಯತೆಯಲ್ಲಿ ನವೋದ್ಯಮಗಳನ್ನು ಬೆಂಬಲಿಸಲು 100 ಕೋಟಿ ರೂ. ಆರ್ಥಿಕ ನೆರವಿಗೆ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ ಎಂದರು.
ನವೀನ ಜಲಜನಕ ಉತ್ಪಾದನೆ, ಸಂಗ್ರಹಣೆ, ಸಾರಿಗೆ ಮತ್ತು ಬಳಕೆಯಲ್ಲಿ ತಂತ್ರಜ್ಞಾನ ಅಳವಡಿಕೆಯ ಪ್ರತಿ ಯೋಜನೆಗೆ 5 ಕೋಟಿ ವರೆಗೆ ಒದಗಿಸುತ್ತದೆ. ಎಲೆಕ್ಟೋಲೈಜರ್ ಉತ್ಪಾದನೆಯಿಂದ ಹಿಡಿದು ಎಐ- ಚಾಲಿತ 25 ನವೋದ್ಯಮಗಳು ನಾವೀನ್ಯತೆ ಪ್ರದರ್ಶಿಸುತ್ತಿವೆ. ರಸಗೊಬ್ಬರಗಳಲ್ಲಿ ಭಾರತ ಮೊದಲ ಹಸಿರು ಅಮೋನಿಯಾ ಹರಾಜು ನಡೆಸಿದ್ದು 2024ರಲ್ಲಿ ಪ್ರತಿ ಕೆಜಿಗೆ 100.28ರೂ.ಇದ್ದರೆ, ಇದೀಗ ಪ್ರತಿ ಕೆಜಿಗೆ ಅದರ ಅರ್ಧದಷ್ಟು ಅಂದರೆ ಕೇವಲ 49.75 ರೂ. ಐತಿಹಾಸಿಕವಾಗಿ ಕಡಿಮೆ ಬೆಲೆ ದಾಖಲಾಗಿದೆ. ಒಡಿಶಾದ ಪ್ಯಾರದೀಪ್ ಫಾಸ್ಪೇಟ್‌ಗಳಲ್ಲಿ ಸರಬರಾಜು ಪ್ರಾರಂಭವಾಗಲಿದೆ ಎಂದು ಹೇಳಿದರು.




