ತುರುವೇಕೆರೆ:- ಮಕ್ಕಳ ದೈಹಿಕ, ಮಾನಸಿಕ ಸದೃಢತೆ ಸರ್ವತೋಮುಖ ಬೆಳವಣಿಗೆಗೆ ಪೌಷ್ಟಿಕ ಆಹಾರ ಸಹಕಾರಿ ಎಂದು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶರಾದ ಪವಿತ್ರ ತಿಳಿಸಿದರು.
ತಾಲೂಕು ಆಡಳಿತ, ಶಿಶು ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಪೌಷ್ಟಿಕಾಂಶ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಗು ಹುಟ್ಟಿದ ಸಮಯದಲ್ಲಿ ತಾಯಿಯ ಎದೆಹಾಲು, ತದನಂತರದಲ್ಲಿ ಹಣ್ಣು, ತರಕಾರಿ ಸೇರಿದಂತೆ ಪೌಷ್ಟಿಕ ಆಹಾರ ಮಕ್ಕಳಲ್ಲಿ ಆರೋಗ್ಯ ವೃದ್ಧಿಸುತ್ತದೆ. ಸಮತೋಲನ, ಪೌಷ್ಟಿಕಾಂಶವುಳ್ಳ ಆಹಾರ ಸೇವೆನಯಿಂದ ದೇಹ ಸದೃಢಗೊಳ್ಳುವುದರ ಜೊತೆಗೆ ರೋಗರುಜಿನಗಳಿಂದ ದೂರವಿರಬಹುದಾಗಿದೆ ಎಂದರು.
ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಶೇಖರ್ ಮಾತನಾಡಿ, ತಾಯಂದಿರು ಅಪೌಷ್ಟಿಕತೆಗೆ ಒಳಗಾಗದಂತೆ ಎಚ್ಚರವಹಿಸಬೇಕು. ಮಗುವಿಗೆ ಎದೆಹಾಲಿಗಿಂದ ಪೌಷ್ಟಿಕ ಆಹಾರ ಮತ್ತೊಂದಿಲ್ಲ. ಮಗುವಿನ ಬೆಳವಣಿಗೆಗೆ ಎದೆಹಾಲು ಅತ್ಯುತ್ತಮ ಆಹಾರವಾಗಿದೆ. ಎಂದರು.
ಈ ಸಂದರ್ಭದಲ್ಲಿ ಹಿರಿಯ ನ್ಯಾಯಾಧೀಶರಾದ ಪುರುಷೋತ್ತಮ್, ಆರೋಗ್ಯ ವೈದ್ಯಾಧಿಕಾರಿ ಡಾ. ಸುಪ್ರಿಯಾ, ಸಿಡಿಪಿಒ ಅಣ್ಣಯ್ಯ, ವಕೀಲರಾದ ಗಂಗಹನುಮಯ್ಯ, ಜಗನ್ನಾಥ್ ಸೇರಿದಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ವರದಿ: -ಗಿರೀಶ್ ಕೆ ಭಟ್, ತುರುವೇಕೆರೆ