ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ

Bharath Vaibhav
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯ ಸರ್ಕಾರದ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್ ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ 6 ನಕ್ಸಲರು ಜ.8ರಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಸಮ್ಮುಖದಲ್ಲಿ ಶರಣಾಗತರಾಗಿದ್ದರು.

ಇಂದು 6 ನಕ್ಸಲರನ್ನು ಎನ್ ಐಎ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ 6 ನಕ್ಸಲರಿಗೂ ಜನವರಿ 31ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ತಮಿಳುನಾಡಿನ ಕೆ ವಸಂತ ಅಲಿಯಾಸ್ ರಮೇಶ್, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಎಂಬ ನಕ್ಸಲರು ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!