ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 12 ರವರೆಗೆ ವಿಸ್ತರಿಸಿ ಬೆಂಗಳೂರಿನ 24ನೇ ಸಿಎಂ ನ್ಯಾಯಾಲಯವು ಆದೇಶ ಹೊರಡಿಸಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂದು ವಿಚಾರಣೆ ನಡೆಸಿದ ನ್ಯಾಯಾಲಯವು, ಸೆಪ್ಟೆಂಬರ್ 12 ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಬೆಂಗಳೂರಿನ 24ನೇ ACMM ನ್ಯಾಯಾಲಯ ಇದೀಗ ಆದೇಶ ಹೊರಡಿಸಿದೆ.
ಈಗಾಗಲೇ ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 3991 ಪುಟಗಳ ಸುದೀರ್ಘವಾದ ಚಾರ್ಜ್ ಶೀಟ್ ಸಲ್ಲಿಸಿದ್ದರು. FSL ವರದಿಯಲ್ಲಿ ರೇಣುಕಾ ಸ್ವಾಮಿ ಪವಿತ್ರಗೌಡಗೆ ಏನೇನು ಮೆಸೇಜ್ ಮಾಡಿದ್ದಾನೆ ಎಂಬುದರ ಕುರಿತು ಮಾಹಿತಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೆ ರೇಣುಕಾ ಸ್ವಾಮಿಗೆ ಪವಿತ್ರ ಗೌಡ ಚಪ್ಪಲಿಯಿಂದ ಹೊಡೆದಿದ್ದು, ಅಲ್ಲದೆ ಚಪ್ಪಲಿ ಮೇಲೆ ರಕ್ತದ ಕಲೆ ಇದ್ದಿದ್ದು ಹಾಗೂ ದರ್ಶನ್ ಬಟ್ಟೆಯ ಮೇಲು ಕೂಡ ರೇಣುಕಾಸ್ವಾಮಿಯ ಕಲೆ ಇದ್ದಿದ್ದು ಸಿಎಫ್‌ಎಸ್‌ಎಲ್ ವರದಿಯಲ್ಲಿ ಬಹಿರಂಗವಾಗಿದೆ.