Ad imageAd image

ಜೂ.24 ರವರೆಗೆ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ 

Bharath Vaibhav
ಜೂ.24 ರವರೆಗೆ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ 
prajwal revanna
WhatsApp Group Join Now
Telegram Group Join Now

ಬೆಂಗಳೂರು: ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ಜೈಲುಪಾಲಾಗಿದ್ದು, ಜೂ.24 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.

ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ ಐಟಿ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಿದ್ದು, ಜೂ.24 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಕೋರ್ಟ್ ಆದೇಶ ಹೊರಡಿಸಿದೆ.

ಎಸ್ ಐಟಿ ವಿಚಾರಣೆ ವೇಳೆ ಈವರೆಗೂ ಪ್ರಜ್ವಲ್ ರೇವಣ್ಣ ಸೂಕ್ತವಾಗಿ ಸ್ಪಂದಿಸಿಲ್ಲ ಎನ್ನಲಾಗಿದೆ. ತನ್ನ ಬಳಿ ಮೊಬೈಲ್ ಕೂಡ ಇಲ್ಲ. ತನ್ನ ವಿರುದ್ಧ ಆರೋಪ ಮಾಡಿರುವವರು ಯಾರು ಎಂಬುದೂ ಗೊತ್ತಿಲ್ಲ ಎಂದು ಹೇಳಿದ್ದನ್ನೇ ಹೇಳುತ್ತಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್ ರೇವಣ್ಣ ಅವರ ಎಸ್ ಐಟಿ ಕಸ್ಟಡಿ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆ ಎಸ್ ಐ ಟಿ ಅಧಿಕಾರಿಗಳು ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಜೂ.24 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

WhatsApp Group Join Now
Telegram Group Join Now
Share This Article
error: Content is protected !!