Ad imageAd image

ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಪ್ರಮಾಣವಚನ ಸ್ವೀಕಾರ 

Bharath Vaibhav
ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಪ್ರಮಾಣವಚನ ಸ್ವೀಕಾರ 
WhatsApp Group Join Now
Telegram Group Join Now

ಬೆಂಗಳೂರು: ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರನ್ನಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ರಾಜ್ಯ ಸರ್ಕಾರ ನೇಮಿಸಿತ್ತು. ಇಂತಹ ಅವರು ಇಂದು ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಇಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಆಯೋಜಿಸಲಾಗಿದ್ದ ಸರಳ ಸಮಾರಂಭದಲ್ಲಿ ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರಿಗೆ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು.

ಗೌರವಾನ್ವಿತ ಶ್ರೀ ನ್ಯಾಯಾಮೂರ್ತಿ ಬಿ.ವೀರಪ್ಪ ಅವರು ಉಪಲೋಕಾಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೌರವಾನ್ವಿತ ನ್ಯಾಯಾಮೂರ್ತಿ ಲೋಕಾಯುಕ್ತ ಬಿ ಎಸ್ ಪಾಟೀಲ್, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article
error: Content is protected !!