Ad imageAd image

ಕೇಂದ್ರ ಬಜೆಟ್ : ಮೇಲಿಂದ ಮೇಲೆ ರಾಜ್ಯಕ್ಕೆ ಅನ್ಯಾಯ : ಸಚಿವ ಡಾ.ಶರಣಪ್ರಕಾಶ ಪಾಟೀಲ ಕಿಡಿ

Bharath Vaibhav
ಕೇಂದ್ರ ಬಜೆಟ್ : ಮೇಲಿಂದ ಮೇಲೆ ರಾಜ್ಯಕ್ಕೆ ಅನ್ಯಾಯ : ಸಚಿವ ಡಾ.ಶರಣಪ್ರಕಾಶ ಪಾಟೀಲ ಕಿಡಿ
WhatsApp Group Join Now
Telegram Group Join Now

ಸೇಡಂ: ಹೆಚ್ಚು ತೆರಿಗೆ ಪಾವತಿಸುವ ಕರ್ನಾಟಕ ರಾಜ್ಯಕ್ಕೆ ಮೇಲಿಂದ ಮೇಲೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ. ಬಜೆಟ್ ವಿಚಾರದಲ್ಲೂ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿರುವುದು ಖಂಡನೀಯ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ತಿಳಿಸಿದ್ದಾರೆ.

ಕೇಂದ್ರ ಬಜೆಟ್ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರೈತರು, ಕಾರ್ಮಿಕರು ಹಾಗೂ ಯುವಜನತೆಗೆ ನೆರವಾಗುವ ಯಾವ ಅಂಶವೂ ಇಲ್ಲದಿರುವುದು. ಅವಶ್ಯಕತೆ ಯೋಜನೆಗಳಿಗೆ ಆದ್ಯತೆ ನೀಡಿಲ್ಲ. ಬೆಲೆ ಏರಿಕೆ, ನಿರುದ್ಯೋಗ ಮತ್ತು ಆದಾಯ ಅಸಮಾನತೆ ಎಂಬ ಮೂಲಭೂತ ಸಮಸ್ಯೆಗಳಿಗೆ ಸ್ಪಷ್ಟ ಪರಿಹಾರಗಳಿಲ್ಲ, ಜೊತೆಗೆ ರಾಜ್ಯದ ಹಿತಕಾಪಾಡುವಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಅತಿಯಾದ ಸಂಪನ್ಮೂಲಗಳಿದ್ದು ಅವುಗಳ ಸಮರ್ಪಕ ಬಳಕೆ ಮಾಡಿಕೊಂಡು ಅಭಿವೃದ್ಧಿಶೀಲತೆಯನ್ನು ಪುನಶ್ಚೇತನದ ಮಾರ್ಗದಲ್ಲಿ ನಡೆಸಬಹುದಾದ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯದ ಕೈಗಾರಿಕಗೆ, ಆರ್ಥಿಕ ಸ್ವಾವಲಂಬನೆಗೆ ‌ಮೋಸ ವೆಸಗಿದೆ ಎಂದು ಕಿಡಿಕಾಡಿದರು.

ನೀರಿಕ್ಷೆಯಂತೆ ಹೆಚ್ಚಿನ ಒತ್ತು ಕಾರ್ಪೋರೆಟ್ ಗಳಿಗೆ ನೀಡಲಾಗಿದ್ದು, ದೇಶ ಅಸ್ಮಿತೆಯಂತಿರುವ ಹಿಂದುಳಿದ, ದೀನ ದಲಿತ ಹಾಗೂ ಕೂಲಿ‌ ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿರುವ ಕೇಂದ್ರ ಸರ್ಕಾರ ತಮ್ಮ ಬಜೆಟ್ ಉಳ್ಳವರ ಪರವಾಗಿ ಘೋಷಿಸಿರುವುದು ದುರಂತವೇ ಸರಿ.
ಶಿಕ್ಷಣ, ಆರೋಗ್ಯ, ಸಾಮಾಜಿಕ ನ್ಯಾಯ ಮತ್ತು ಗ್ರಾಮೀಣ ಅಭಿವೃದ್ಧಿಗೆ ನೀಡಬೇಕಾದ ಅನುದಾನವನ್ನು ಕಡಿತಗೊಳಿಸಲಾಗಿದೆ. ಬಹಳಷ್ಟು ಪ್ರಚಾರದಲ್ಲಿ ಜಾರಿಗೆ ತರಲಾದ ವಿಜಿ-ಗ್ರಾಮಾಜಿ ಯೋಜನೆಗೆ ಕೇವಲ 96,000 ಕೋಟಿ ಅನುದಾನವನ್ನು ನಿಗದಿಗೊಳಿಸಿದ್ದು ಗ್ರಾಮೀಣ ಭಾಗದ ಜನರಿಗೆ ಅನ್ಯಾಯ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ವರದಿ : ವೆಂಕಟಪ್ಪ ಕೆ ಸುಗ್ಗಾಲ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!