Ad imageAd image

ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಕೆ. ಕಸ್ತೂರಿರಂಗನ್ ಅಂತ್ಯಕ್ರಿಯೆ 

Bharath Vaibhav
ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಕೆ. ಕಸ್ತೂರಿರಂಗನ್ ಅಂತ್ಯಕ್ರಿಯೆ 
WhatsApp Group Join Now
Telegram Group Join Now

ಬೆಂಗಳೂರು : ಇಸ್ರೋ ಮಾಜಿ ಅಧ್ಯಕ್ಷ, ಎನ್​​ಇಪಿ ಕರಡು ಸಮಿತಿ ಅಧ್ಯಕ್ಷರಾಗಿದ್ದ ಪದ್ಮವಿಭೂಷಣ ಡಾ.ಕೆ.ಕಸ್ತೂರಿರಂಗನ್ ಅವರ ಅವರ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಹಾಗಾಗಿ ಇಂದು ನಡೆಯಲಿರುವ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೇರವೇರಿಸಲು ಸರ್ಕಾರ ಆದೇಶ ಹೊರಡಿಸಿದೆ.

ಕಸ್ತೂರಿರಂಗನ್ ಅವರ ಪಾರ್ಥಿವ ಶರೀರದ ದರ್ಶನಕ್ಕೆ ಭಾನುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 12 ಗಂಟೆವರೆಗೆ ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುತ್ತಿದೆ.

1940ರ ಅಕ್ಟೋಬರ್ 24ರಂದು ಕೇರಳದ ಎರ್ನಾಕುಲಂನಲ್ಲಿ ಜನಿಸಿದ ಕಸ್ತೂರಿರಂಗನ್ ಅವರು ಮೂರು ದಶಕಗಳ ಕಾಲ ಭಾರತೀಯ ಬಾಹ್ಯಾಕಾಶ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ಕೇವಲ ಬಾಹ್ಯಾಕಾಶ ಕ್ಷೇತ್ರದಲ್ಲಷ್ಟೇ ಅಲ್ಲದೆ, ಪರಿಸರ, ಶಿಕ್ಷಣ ಮತ್ತು ಯೋಜನಾ ಆಯೋಗದಲ್ಲಿಯೂ ಇವರ ಕೊಡುಗೆ ಸ್ಮರಣೀಯವಾದದ್ದು.

ಕಸ್ತೂರಿರಂಗನ್ 2003ರವರೆಗೆ ೯ಕ್ಕೂ ಹೆಚ್ಚು ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ನೇತೃತ್ವ ವಹಿಸಿದ್ದರು. ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮತ್ತು ಬಾಹ್ಯಾಕಾಶ ಇಲಾಖೆಯಲ್ಲಿ ಭಾರತ ಸರ್ಕಾರಕ್ಕೆ ಕಾರ್ಯದರ್ಶಿಯಾಗಿ ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದರು.

2003-2009ರವೆಗೆ ರಾಜ್ಯಸಭಾ ಸದಸ್ಯರಾಗಿ ದ್ದರು. ದೇಶದ ಅತ್ಯುನ್ಯತ ನಾಗರಿಕ ಪ್ರಶಸ್ತಿಗಳಾದ ಪದ್ಮಶ್ರೀ (1982), ಪದ್ಮಭೂಷಣ (1992) ಮತ್ತು ಪದ್ಮ ವಿಭೂಷಣ (2000) ಪಡೆದುಕೊಂಡಿದ್ದರು.

WhatsApp Group Join Now
Telegram Group Join Now
Share This Article
error: Content is protected !!