ಬೆಂಗಳೂರು: ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಬ್ಬಿಗೆರೆಯಲ್ಲಿ ನೂತನವಾಗಿ ಪುನರ ಜೀರ್ಣೋದ್ಧಾರ ಶ್ರೀ ಸೀತಾ ರಾಮಾಂಜನೇಯ ಸ್ವಾಮಿ ಹಾಗೂ ಪದ್ಮಾವತಿ ಸಮೇತ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯ ನವೆಂಬರ್ 2ರಂದು ಉದ್ಘಾಟನೆಗೊಳ್ಳಲಿದೆ ಎಂದು ದೇಗುಲದ ಟ್ರಸ್ಟಿನ ಮುಖ್ಯಸ್ಥ ಹಾಗೂ ಬಿಬಿಎಂಪಿ ಮಾಜಿ ಸದಸ್ಯ ಕೆ.ನಾಗಭೂಷಣ್ ತಿಳಿಸಿದ್ದಾರೆ.

ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ನಾಗಭೂಷಣ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ವಿರೋಧ ಪಕ್ಷದ ನಾಯಕ ಆರ್ ಅಶೋಕ್, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಮುನಿರಾಜು, ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿ, ಮಾಜಿ ಶಾಸಕ ಆರ್ ಮಂಜುನಾಥ್ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕುಂಭಾಭಿಷೇಕ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಲಿದ್ದಾರೆ ಎಂದು ಕೆ. ನಾಗಭೂಷಣ್ ತಿಳಿಸಿದರು.
ಅ.31 ರಿಂದ ನ.3 ರವರೆಗೆ 5 ದಿನಗಳ ಕಾಲ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ನ.2 ರವರೆಗೆ ಕುಂಭಾಭಿಷೇಕ ನಡೆಯಲಿದೆ ಎಂದು ಅವರು ವಿವರಿಸಿದರು.ಈ ಮೊದಲಿಗೆ ಸೀತಾರಾಮಾಂಜನೇಯ ವಿಗ್ರಹಗಳಿದ್ದು ಈಗ ಪದ್ಮಾವತಿ ಸಮೇತ ಶ್ರೀ ವೆಂಕಟೇಶ್ವರ ಸ್ವಾಮಿ ವಿಗ್ರಹಗಳನ್ನು ಸಹ ಪ್ರತಿಷ್ಟಾಪಿಸಲಾಗಿದೆ ಎಂದು ಹೇಳಿದರು.
ಹಿರಿಯ ರಾಜಕಾರಣಿ ಅಬ್ಬಿಗೆರೆ ರಾಜಣ್ಣ, ಪುರುಷೋತ್ತಮ್,ವಿಶ್ವನಾಥ್,ಭೈರಣ್ಣ ಇವರುಗಳು ಸುದ್ದಿಗೋಷ್ಟಿಯಲ್ಲಿ ಇದ್ದರು.




