ಬೆಂಗಳೂರು: ಇಡಿ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಮಾಡಿರುವ ಕಾಂಗ್ರೆಸ್, ಇಡಿ ಅಧಿಕಾರಿಗಳನ್ನು ಬಂಧಿಸಿವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೈ ನಾಯಕರು ಪ್ರತಿಭಟನೆ ನಡೆಸಿದ್ದಾರೆ.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಎಂಬಿ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ ಸೇರಿದಂತೆ ಕಾಂಗೆಸ್ ಸಚಿವರು, ಶಾಸಕರು ಧರಣಿ ನಡೆಸಿದ್ದು, ಇಡಿ, ಸಿಬಿಐ ವಿರುದ್ಧ ಧಿಕ್ಕಾರ ಕೂಗಿದ್ದಾರೆ.ಇಡಿ ಅಧಿಕಾರಿಗಳು ಕೇಂದ್ರ ಬಿಜೆಪಿ ಸರ್ಕಾರದ ಕೈಗೊಂಬೆಗಳಾಗಿದ್ದಾರೆ.
ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ನಾಗೇಂದ್ರ ಸೇರಿದಂತೆ ಪ್ರಮುಖರ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ನಿಗಮದ ಹೆಚ್ಚುವರಿ ನಿರ್ದೇಶಕ ಕಲ್ಲೇಶಪ್ಪ ಎಂಬುವವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಇಡಿ ಅಧಿಕರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕಿರುಕುಳ ನೀಡುತ್ತಿರುವ ಇಡಿ ಅಧಿಕಾರಿಗಳನ್ನು ಬಂಧಿಸುವಂತೆ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.