ಬೆಳಗಾವಿ : ನಿನ್ನೆ ದಿನಾಂಕ 30 ರಂದು ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿ ನಗರ ಸಮೀಪದ ಕಾಕತಿಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸುಸಜ್ಜಿತ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಇಂದು ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ, ಜನರ ಸುರಕ್ಷತೆಗಾಗಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಅಳವಡಿಸಿದ ಸಿಸಿಟಿವಿ ಕ್ಯಾಮರಾಗಳನ್ನು ಚಾಲನೆ ನೀಡಲಾಯಿತು. ನಂತರ, ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣವಾದ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಬುಡಾ ಅಧ್ಯಕ್ಷರಾದ ಶ್ರೀ ಲಕ್ಷ್ಮಣರಾವ್ ಚಿಂಗಳೆ ಸಚಿವರ ಆಪ್ತರು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ರಾಮ ಅಣ್ಣಾ ಗುಳ್ಳಿ ಕಾಕತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಸಾಗರ್ ಪಿಂಗಟ ಸಿದ್ದು ಸುಣಗಾರ ಯಲ್ಲಪ್ಪ ಕೊಳಿಕಾರ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ




