ಗೋಕಾಕ: ಶಿಕ್ಷಣಕ್ಕಿದಷ್ಟು ಮಹತ್ವ ಕಲೆಗೂ ಇದೆ. ಶಿಕ್ಷಣ, ಕಲೆಯಿಂದ ವಿದ್ಯರ್ಥಿಗಳು ಜೀವನ ಕಟ್ಟಿಕೊಳ್ಳಬಹುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ಗೋಕಾಕ ನಗರದ ಸರಕಾರಿ ಪದವಿ ಪರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾಡಳಿತ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕರ್ಯಾಲಯ ಸಹಯೋಗದಲ್ಲಿ ಆಯೋಜಿಸಿದ್ದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ೨೦೨೫–೨೬ ಕರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸತೀಶ್ ಶುರ್ಸ್ ಕರ್ಯಕ್ರಮದಲ್ಲಿ ಪಾಲ್ಗೊಂಡ ಸಾವಿರಾರೂ ವಿದ್ಯರ್ಥಿಗಳು ರಾಜ್ಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು ನಮಗೂ ಹೆಮ್ಮೆ ತಂದಿದೆ. ಇಂತಹ ಕರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಈ ನಾಡಿನ ಕಲೆ, ಸಂಸ್ಕೃತಿ, ಪರಂಪರೆಯನ್ನು ಎತ್ತಿ ಹಿಡಿಯಬೇಕೆಂದು ಇದೇ ವೇಳೆ ಯುವ ಪ್ರತಿಭೆಗಳಿಗೆ ಸಚಿವರು ಕರೆ ನೀಡಿದರು.
ಈ ಸಂರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ. ಬಳಿಗಾರ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.




