ಮುಂಬೈ: ನಟ ವಿಜಯ್ ದೇವರಕೊಂಡ ಅವರ ಬಹುನಿರೀಕ್ಷಿತ ‘ಕಿಂಗ್ಡಮ್‘ ಚಿತ್ರಕ್ಕೆ ನಟಿ ರಶ್ಮಿಕಾ ಮಂದಣ್ಣ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಪೋಸ್ಟ್ ಹಂಚಿಕೊಂಡಿರುವ ರಶ್ಮಿಕಾ, ವಿಜಯ್ ದೇವರಕೊಂಡ ಅವರು ಚಿತ್ರಕ್ಕಾಗಿ ಮಾಡಿದ ಕಠಿಣ ಪರಿಶ್ರಮವನ್ನು ಮುಕ್ತ ಕಂಠದಿಂದ ಕೊಂಡಾಡಿದ್ದಾರೆ. ನಟಿಯ ಸಂದೇಶಕ್ಕೆ ವಿಜಯ್ ದೇವರಕೊಂಡ ಅವರು ಪ್ರತಿಕ್ರಿಯಿಸಿದ್ದು, ಧನ್ಯವಾದ ಹೇಳಿದ್ದಾರೆ.




