ಬೆಂಗಳೂರು: ರಾಜ್ಯಗಳ ಮೇಲೆ ಹಿಂದಿ ಹೇರಿಕೆ ವಿರುದ್ಧ ಹೋರಾಟ ಹೆಚ್ಚಾಗ್ತಾ ಇದ್ದಂತೆ ರಾಜ್ಯದಲ್ಲಿ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಮಹತ್ವದ ಹೆಜ್ಜೆಯನ್ನಿಟ್ಟಿದ್ದಾರೆ. ಇನ್ನು ಮುಂದೆ ಕರ್ನಾಟಕದಲ್ಲಿ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡ ಲೇಬಲ್ ಕಡ್ಡಾಯವಾಗಿ ಇರಬೇಕೆಂದು ಸಿಎಂ ಆದೇಶ ಹೊರಡಿಸಿದ್ದಾರೆ
ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸಲು ಸಿಎಂ ಸಿದ್ದರಾಮಯ್ಯ ಇನ್ನು ಮುಂದೆ ರಾಜ್ಯದಲ್ಲಿ ತಯಾರಾಗುವ ಎಲ್ಲಾ ಸರ್ಕಾರಿ ಮತ್ತು ಖಾಸಗಿ ವಲಯದ ಉತ್ಪಾದಕಗಳ ಮೇಲೆ ಕನ್ನಡ ಭಾಷೆಯಲ್ಲಿ ಕಡ್ಡಾಯವಾಗಿ ಇರಲೇಬೇಕು ಎಂಬ ಆದೇಶವನ್ನು ಹೊರಡಿಸಿದ್ದಾರೆ.
ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಉಮಾದೇವಿ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.




