ಬೆಂಗಳೂರು : ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ ನಮ್ಮ ನಾಡಿನ ಆರುವರೆ ಕೋಟಿ ಜನರಿಗೆ ಹೆಮ್ಮೇಯ ನಾಡು ಎಂದು ಕೆಪಿಜೆಪಿ ಪಾರ್ಟಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಮಹೇಶ್ ಗೌಡ್ರು ಹೇಳಿದರು.
ಅವರು ಶ್ರೀ ಜಯ ದುರ್ಗ ಸೇವಾ ಚಾರಿಟೇಬಲ್ ಟ್ರಸ್ಟ್ ಲಗ್ಗೆರೆ ಟ್ರಸ್ಟಿ ನ ೨ನೇ ವರ್ಷದ ಕನ್ನಡ ರಾಜ್ಯೋತ್ಸವ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಪೆನ್ನು ವಿತರಿಸುವ ಕಾರ್ಯಕ್ರಮವನ್ನು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಟ್ರಸ್ಟಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ನೇತೃತ್ವದಲ್ಲಿ ಆಯೋಜಿಸಲಾಗಿತ್ತು.
ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಪುನಸ್ಕಾರ ಸಲ್ಲಿಸಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.
ನಂತರ ಅವರು ನಮ್ಮೆಲ್ಲರಿಗೂ ಈ ನಾಡು ಅನೇಕ ಸಾಂಸ್ಕೃತಿಕ ವೈವಿಧ್ಯತೆಯಿಂದ ಏಕತೆ ಕಡೆ ನಡೆದ ನಾಡು ಇಲ್ಲಿಯ ಸಾಹಿತ್ಯ ಸಾಂಸ್ಕೃತಿಕ ಪರಂಪರೆ ಶ್ರೀಮಂತಿಕೆಯಿಂದ ಕೂಡಿದೆ ಅದಕ್ಕಾಗಿ ಕನ್ನಡಕ್ಕೆ ಏಂಟು ಜ್ಞಾನ ಪೀಠ ಪ್ರಶಸ್ತಿ ಪಡೆದ ಭಾಷೆ ಈ ನಾಡಿನ ಹಿರಿಮೆಯನ್ನು ಉಳಿಸಿ ಬೆಳೆಸಲು ನಾಡಿನ ನೆಲ ಜಲ ಭಾಷೆ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದು ಮಕ್ಕಳಿಗೆ ನೋಟ್ ಬುಕ್ ಪೆನ್ನು ವಿತರಿಸಿ ಮಹೇಶ್ ಗೌಡ್ರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಇದೆ ವೇಳೆ ಶಾಲಾ ಮಕ್ಕಳಿಗೆ ಸನ್ಮಾನಿಸಿ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.
ಈ ಸಂದರ್ಭದಲ್ಲಿ ಪ್ರತಿಷ್ಠಾನ ಖ್ಯಾತ ವೈದ್ಯ ಡಾ. ಬಾನು ಪ್ರಕಾಶ್ ಎಂ.ಎಸ್, ಕುಮಾರ್ ಸಿ.ಆರ್.ಪಿ ಹೆಗ್ಗನಹಳ್ಳಿ, ಪ್ರೌಢ ಶಾಲೆ ಮುಖ್ಯೋಪಾಧ್ಯಾಯಿನಿ ಪ್ರೇಮಿಳ, ಮುಖ್ಯೋಪಾಧ್ಯಾಯ ಉಮೇಶ್, ಅಶೋಕ್ ಸೇರಿದಂತೆ ಶಾಲಾ ಶಿಕ್ಷಕರು ಶಿಕ್ಷಕಿಯರು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಮುಂತಾದವರು ಇದ್ದರು.
ವರದಿ: ಅಯ್ಯಣ್ಣ ಮಾಸ್ಟರ್