ಅಥಣಿ: –ಕನ್ನಡ ಭಾಷೆ, ಸಂಸ್ಕೃತಿ ಪರಂಪರೆಗೆ ತನ್ನದೇ ಆದ ಇತಿಹಾಸವಿದೆ. ಆದ್ದರಿಂದ ಕನ್ನಡ ನಾಡು-ನುಡಿ, ಸಂಸ್ಕೃತಿ, ನೆಲ-ಜಲದ ಬಗ್ಗೆ ಪ್ರತಿಯೊಬ್ಬರಲ್ಲೂ ಅಭಿಮಾನ, ಹೆಮ್ಮೆ ಇರಬೇಕು ಎಂದು ಅಂಗನವಾಡಿ ಕಾರ್ಯಕರ್ತರು ಶೋಭಾ ಕಾಂಬಳೆ ಅವರು ಹೇಳಿದರು.
ಅವರು ಅಥಣಿ ತಾಲೂಕಿನ ದೇಸಾಯರಟ್ಟಿ ಅಂಗನವಾಡಿ ಕೇಂದ್ರ ನಂಬರ್ ೧ ರಲ್ಲಿ ೬೮ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯಲ್ಲಿ ತಾಯಿ ಭುವನೇಶ್ವರ ಫೋಟೋ ಪೂಜೆಯನ್ನು ನೆರವೇರಿಸಿದರು. ಮಾತನಾಡಿದರು. ಕನ್ನಡ ಭಾಷೆಯ ಬಗ್ಗೆ ವಿಶೇಷ ಅಭಿಮಾನ ಹೊಂದಿರಬೇಕು. ಕನ್ನಡಿಗರು ಸ್ಪಷ್ಟವಾಗಿ ಕನ್ನಡ ಮಾತನಾಡುವುದರೊಂದಿಗೆ ಬೇರೆ ಭಾಷಿಕರಿಗೂ ಕನ್ನಡವನ್ನು ಕಲಿಸಬೇಕು. ಕನ್ನಡ ಭಾಷೆಗಿರುವ ಶಕ್ತಿ, ತಾಕತ್ತು ಬೇರೆ ಭಾಷೆಯಲ್ಲಿ ಕಾಣಲು ಸಾಧ್ಯವಾಗದು. ಆದ್ದರಿಂದ ಕನ್ನಡವನ್ನು ಉಳಿಸಿ, ಕನ್ನಡವನ್ನು ಬೆಳೆಸಿ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಪುಟಾಣಿ ಮಕ್ಕಳಿಂದ ಜರುಗಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜನಮನ ಸೆಳೆದವು.ಈ ಸಂದರ್ಭದಲ್ಲಿ ಶ್ರೀಮತಿ ಜಯಶ್ರೀ ಸಂಭಾಜಿ ಚವ್ಹಾನ ಹಾಗೂ ಅಂಗನವಾಡಿ ಕಾರ್ಯಕರ್ತರು ಗ್ರಾಮಸ್ಥರು ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.
ವರದಿ: ಸುಕುಮಾರ ಮಾದರ್