——————ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲರಿಂದ ಧ್ವಜಾರೋಹಣ
ರಾಯಚೂರು: 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಯಚೂರಿನ ಜಿಲ್ಲಾ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡ.ಶರಣಪ್ರಕಾಶ ಪಾಟೀಲ್ ರಾಷ್ಟ್ರ ಧ್ವಜಾರೋಹಣ ಮಾಡಿದರು.

ಈ ವೇಳೆ ಮಾತನಾಡುದ ಅವರು, ನಮ್ಮ ಸರ್ಕಾರ ಜನಪರ ಆಡಳಿತ ನೀಡುತ್ತಿದೆ. ನೆರೆ ಹಾವಳಿ ಯಿಂದ ತತ್ತರಿಸಿದ ಉತ್ತರ ಕರ್ನಾಟಕಕ್ಕೆ ನೆರೆ ಪರಿಹಾರ ಘೋಷಿಸಿದೆ. ಕಲ್ಯಾಣ ಕರ್ನಾಟಕದ ಏಳಿಗೆಗೆ ಅನೇಕ ಯೋಜನೆ ರೂಪಿಸಿದೆ. ಕೆಕೆಆರ್ ಡಿಬಿಗೆ ಪ್ರತಿವರ್ಷ 5ಸಾವಿರ ಕೋಟಿ ನೀಡುತ್ತಿದೆ. ರಾಯಚೂರು ಜಿಲ್ಲೆಯಲ್ಲಿ ಅಭಿವೃದ್ಧಿಗೆ ಏರ್ ಪೋರ್ಟ್, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೈ.ವೆ ಸೇರಿ ಅನೇಕ ಅಭಿವೃದ್ಧಿ ಕೆಲಸ ಮಾಡಲಾಗುತ್ತಿದೆ. ಏಮ್ಸ್ ಸ್ಥಾಪಿಸಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿದೆ. ಮುಖ್ಯಮಂತ್ರಿ ಸೇರಿ ಮಂತ್ರಿಗಳ ನಿಯೋಗ ಹೋಗಿದೆ. ಕೇಂದ್ರ ಸರ್ಕಾರ ಸ್ಪಂದಿಸಲಿದೆ ಎಂಬ ಭರವಸೆ ಇದೆ.
ಸಿ.ಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ ಪ್ರತಿಯೊಂದು ಕೆಲಸಕ್ಕೆ ಆದ್ಯತೆ ನೀಡಿ ಸಮೃದ್ಧ ಕರ್ನಾಟ ಅಭಿವೃದ್ಧಿ ಗೆ ಬದ್ಧವಾಗಿದೆ. ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.
ಈವೇಳೆ ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಎಸ್.ಶಿವರಾಜ ಪಾಟೀಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ರಾಯಚೂರು ಲೋಕಸಭಾ ಸದಸ್ಯ ಜಿ.ಕುಮಾರ ನಾಯಕ, ವಿಧಾನ ಪರಿಷತ್ ಶಾಸಕರಾದ ಎ.ವಸಂತಕುಮಾರ, ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ರಾಮಸ್ವಾಮಿ, ರಾಯಚೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪವನ್ ಕಿಶೋರ್ ಪಾಟೀಲ್, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಎಂ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ವರದಿ: ಗಾರಲ ದಿನ್ನಿ ವೀರನ ಗೌಡ




