Ad imageAd image

ಒಂದೇ ವಾರದಲ್ಲಿ 509 ಕೋಟಿ ರೂ. ಗಳಿಸಿದ ಕಾಂತಾರ 1

Bharath Vaibhav
ಒಂದೇ ವಾರದಲ್ಲಿ 509 ಕೋಟಿ ರೂ. ಗಳಿಸಿದ ಕಾಂತಾರ 1
WhatsApp Group Join Now
Telegram Group Join Now

ಬೆಂಗಳೂರು : ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ ಚಾಪ್ಟರ್ 1’ ಚಿತ್ರ ಧೂಳೆಬ್ಬಿಸಿದೆ.ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆದ ಕಾಂತಾರ-1 ಅಬ್ಬರದ ಗಳಿಕೆ ಮಾಡಿದ್ದು, 1 ವಾರಕ್ಕೆ ಬರೋಬ್ಬರಿ 509 ಕೋಟಿ ಕಲೆಕ್ಷನ್ ಮಾಡಿದೆ.ರಿಲೀಸ್ ಆದ 2 ದಿನಕ್ಕೆ 100 ಕೋಟಿ ಕಲೆಕ್ಷನ್ ಮಾಡಿದ ಚಿತ್ರ 1 ವಾರಕ್ಕೆ 509.25 ಕೋಟಿ ಗಳಿಸಿದೆ.

ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಮಾಹಿತಿ ಹಂಚಿಕೊಂಡಿದೆ.ದೇಶಾದ್ಯಂತ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ‘ಕಾಂತಾರ ಚಾಪ್ಟರ್ 1’ ಚಿತ್ರಕ್ಕೆ ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯಗಳಲ್ಲಿ, ದೇಶಾದ್ಯಂತ ಪ್ರೇಕ್ಷಕರು ಫಿದಾ ಆಗಿದ್ದಾರೆ.

ಕಾಂತಾರ-1 ಪೌರಾಣಿಕ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಇದನ್ನು ರಿಷಬ್ ಶೆಟ್ಟಿ ಬರೆದು ನಿರ್ದೇಶಿಸಿದ್ದಾರೆ ಮತ್ತು ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ. ಬಿ. ಅಜನೀಶ್ ಲೋಕನಾಥ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!