ಬೆಳಗಾವಿ: ಕರವೇ ಹಾಗೂ ಇತರ ಸಂಘಟನೆಗಳು ಶನಿವಾರ ನೀಡಿದ್ದ ಬಂದ್ ಕರೆ ಹಿನ್ನೆಲೆಯಲ್ಲಿ ಇಂದು ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ (ಶಿವರಾಮೇಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರತಿಭಟನೆ ವೇಳೆ ಎಂಇಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕೆಂದು ಪ್ರತಿಭಟನೆಕಾರರು ಆಗ್ರಹಿಸಿದರು.