ಕಾಗವಾಡ: ಪಟ್ಟಣದ ಮುಖ್ಯರಸ್ತೆಗಳಲ್ಲಿ ಮಳೆಯಿಂದಾಗಿ ಬೃಹತ್ ಗುಂಡಿಗಳು ಬಿದ್ದಿದ್ದು, ಇದರಿಂದ ಬೈಕ್ ಸವಾರರು ಮತ್ತು ಪಾದಚಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ರಸ್ತೆ ಗುಂಡಿಗಳಲ್ಲಿ ಸಸಿಗಳನ್ನು ನೆಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅರುಣ್ ಜೋಶಿ, ರಸ್ತೆ ಗುಂಡಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಈ ಗುಂಡಿಗಳನ್ನು ಮುಚ್ಚದೇ ಇದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ರವೀಂದ್ರ ಹಾದಿಮನಿ ಮತ್ತು ಗ್ರೇಡ್-2 ತಹಶೀಲ್ದಾರ್ ರಶ್ಮಿ ಜಕಾತಿ ಭೇಟಿ ನೀಡಿ ಮನವಿ ಸ್ವೀಕರಿಸಿದರು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸುವುದಾಗಿ ಅವರು ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಕರವೇ ತಾಲೂಕು ಅಧ್ಯಕ್ಷ ಸಿದ್ದು ವಡೆಯರ್, ರೈತ ಘಟಕದ ಅಧ್ಯಕ್ಷ ಗಣೇಶ್ ಕೊಳೆಕರ್, ಉಪಾಧ್ಯಕ್ಷ ಫಾರೂಕ್ ಅಲಾಸ್ಕರ್, ಮಹೇಶ್ ಮಟಗರಿ, ಬಾಬಾಸಾಬ್ ಕೊಟ್ಟಲಗೆ, ಅಸಲಂ ಜಮಾದಾರ್, ರಾಮು ವಡ್ಡರ್, ಪ್ರವೀಣ್ ಪಾಟೀಲ್, ಅಪ್ಪಾಸಾಬ್ ಗುಮಟೆ, ಮಹೇಶ್ ಪಾಟೀಲ್, ಅರುಣ್ ಜೋಶಿ ಮತ್ತು ಸಚಿನ್ ಗಾವಡೆ ಸೇರಿದಂತೆ ಇತರರು ಭಾಗವಹಿಸಿದ್ದರು.
ವರದಿ: ಚಂದ್ರಕಾಂತ ಕಾಂಬಳೆ




