ಶಿರಹಟ್ಟಿ : ತಾಲೂಕಿನಾದ್ಯಾಂತ ದಲಿತ ಸಮುದಾಯವು ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕೆಂದು ಆಗ್ರಹಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಸಮಿತಿಯ ಘಟಕದ ವತಿಯಿಂದ ಸೋಮವಾರ ತಹಶೀಲ್ದಾರ್ ಕೆ ರಾಘವೇಂದ್ರ ರಾವ್. ಅವರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆಯಲ್ಲಿ ಸಮಿತಿಯ ತಾಲೂಕು ಸಂಚಾಲಕರಾದ, ರವಿ ಗುಡಿಮನಿ ದಲಿತ ಸಮುದಾಯದ ಮುಖಂಡರಾದ ಮುತ್ತು ಬಾವಿಮನಿ ,ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ದಲಿತ ಸಮುದಾಯವು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ, ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮನವಿಯಲ್ಲಿನ ಪ್ರಮುಖ ಬೇಡಿಕೆಗಳು
ತಾಲೂಕಿನಾದ್ಯಾಂತ ದಲಿತ ಸಮುದಾಯಕ್ಕೆ ಅವಶ್ಯವಿದ್ದ ಕಡೆ ಹೊಸ ಸ್ಮಶಾನ ಭೂಮಿ ಮಂಜೂರು ಮಾಡಬೇಕು ಹಾಗೂ ಈಗಿರುವ ಸ್ಮಶಾನಗಳನ್ನು ಅಭಿವೃದ್ಧಿಪಡಿಸಬೇಕು.ತಾಲೂಕಿನ ಕೆಲವು ಗ್ರಾಮಗಳಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆಯಲ್ಲಿದ್ದು, ಇದನ್ನು ತಡೆಗಟ್ಟಲು ಜಿಲ್ಲಾಡಳಿತ ಕಠಿಣ ಕ್ರಮ ಜರುಗಿಸಬೇಕು. ಅಲ್ಲದೆ ದಲಿತ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿದ್ಯಾರ್ಥಿ ವೇತನ ದೊರೆಯುವಂತೆ ಕ್ರಮ ಕೈಗೊಳ್ಳಬೇಕು.
ದಲಿತರಿಗೆ ಮಂಜೂರಾದ ನಿವೇಶನಗಳಿಗೆ ಕೂಡಲೇ ಹಕ್ಕು ಪತ್ರಗಳನ್ನು ನೀಡಬೇಕು.ಪ್ರತಿಯೊಂದು ಗ್ರಾಮದ ದಲಿತ ಕಾಲೋನಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಶೀಘ್ರವಾಗಿ ಅಭಿವೃದ್ಧಿಪಡಿಸಬೇಕು.ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನ ದುರ್ಬಳಕೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಶೀಲನೆ ನಡೆಸಿ ವರದಿ ನೀಡಬೇಕು ಎಂದು ಹೇಳಿದರು.
ತಹಶೀಲ್ದಾರರು ಅವರು ಈ ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಸಭೆ ಕರೆದು, ನಮ್ಮ ಮನವಿಯಲ್ಲಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕು. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು
ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಮಹಿಳಾ ಸಂಚಾಲಕರಾದ ಅಂಜನಾದೇವಿ ಮ್ಯಾಗೇರಿ, ಎಂ ಕೆ ಲಮಾಣ, ಪ್ರಕಾಶ್ ಬಡನ್ನವರ್ ಚಂದ್ರು ಪೋತರಾಜ ಹನುಮಂತಪ್ಪ ಬಡ್ಡೆಪ್ಪನವರ್ ಅಶೋಕ್ ಬಡವರ ರಮೇಶ್ ಗುಡಿಮನಿ ಶಿವನಗೌಡ ಪಾಟೀಲ ಯಲ್ಲಪ್ಪ ಗೋಡನ್ನವರ್ ಪರಮೇಶ್ ಗುಡಿಮನಿ ಸುಭಾಷ್ ಮುಳಗುಂದ ಮರಿಯಪ್ಪ ಹಾಗೂ ಮುಂತಾದವರು ಉಪಸ್ಥಿತರಿದ್ದರು..
ವರದಿ:ಅಣ್ಣಪ್ಪ ಗುತ್ತೆಮ್ಮನವರ




