ಬೆಳಗಾವಿ:-ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರಿ ಸತೀಶ ಅಣ್ಣಾ ಜಾರಕಿಹೊಳಿಯವರು ರಾಯಬಾಗ ತಾಲೂಕಿನ ಕುಡಚಿ ಮತಕ್ಷೇತ್ರದಲ್ಲಿ ಸತತ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಪ್ರವಾಹಕ್ಕೆ ತುತ್ತಾಗಿರುವ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕುಡಚಿ -ಉಗಾರ ಮುಖ್ಯ ಸೇತುವೆಯ ಪರಿಶೀಲನೆ ನಡೆಸಿದ ನಂತರ ಜಿಲ್ಲಾಡಳಿತದಿಂದ ಮಾಹಿತಿಯನ್ನು ಪಡೆದು ಕೆಲ ಅಗತ್ಯ ಸೂಚನೆಗಳನ್ನು ನೀಡಿದರು.
ಮಹಾರಾಷ್ಟ್ರದಲ್ಲಿ ಇನ್ನೂ 3 ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಇಂದು ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುವ ಸಾಧ್ಯತೆ ಇದೆ. ಈಗಾಗಲೇ ಕೃಷ್ಣಾ ನದಿಯಲ್ಲಿ 2.50 ಲಕ್ಷ ಕ್ಯುಸೆಕ್ ನೀರು ಹರಿಯುತ್ತಿದೆ. ಇಂದು 50 ಸಾವಿರ ಕ್ಯುಸೆಕ್ ನೀರು ಬಿಡುವ ಸಾಧ್ಯತೆ ಇದೆ. ಕೋಯ್ನಾ ಡ್ಯಾಂ ಅಧಿಕಾರಿಗಳೊಂದಿಗೆ ಬೆಳಗಾವಿ ಜಿಲ್ಲಾಡಳಿತ ನಿರಂತರ ಸಂಪರ್ಕದಲ್ಲಿದ್ದು, ನೀರಿನ ಮಟ್ಟದ ಮಾಹಿತಿಯನ್ನು ಪಡೆದು ತುರ್ತು ಪರಿಸ್ಥಿತಿಯಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಜ್ಜಾಗಿದೆ.
ನದಿ ಪಾತ್ರದಲ್ಲಿರುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು. ಜಿಲ್ಲಾಡಳಿತ ಜೊತೆಗೆ ಸಹಕರಿಸಿ ಎಂದು ಈ ಮೂಲಕ ಮನವಿ ಮಾಡುತ್ತೇನೆ. NDRF ತಂಡಗಳನ್ನು ಪ್ರವಾಹ ಬರುವ ಪ್ರದೇಶಗಳಲ್ಲಿ ನಿಯೋಜಿಸಲಾಗಿದ್ದು ಪ್ರವಾಹ ಬಂದರೆ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸನ್ನದ್ಧಾಗಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಹಮ್ಮದ್ ರೋಷನ್, ಜಿ.ಪಂಚಾಯತಿ ಸಿಇಓ ರಾಹುಲ್ ಶಿಂಧೆ, ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ವರದಿ :-ರಾಜು ಮುಂಡೆ