Ad imageAd image

ಕರ್ನಾಟಕವು ಕರಾಳ ದಿನಗಳನ್ನು ಎದುರಿಸಬೇಕಾಗಿದೆ : ಪಿ. ರಾಜೀವ್

Bharath Vaibhav
ಕರ್ನಾಟಕವು ಕರಾಳ ದಿನಗಳನ್ನು ಎದುರಿಸಬೇಕಾಗಿದೆ : ಪಿ. ರಾಜೀವ್
P RAJEEV
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ ಸಿಎಂ, ಗೃಹ ಸಚಿವರ ಕೃಪಾಕಟಾಕ್ಷದಿಂದ ಇವತ್ತು ಕರ್ನಾಟಕವು ಕರಾಳ ದಿನಗಳನ್ನು ಎದುರಿಸಬೇಕಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆಕ್ಷೇಪ ವ್ಯಕ್ತಪಡಿಸಿದರು.

ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾನೂನು- ಸುವ್ಯವಸ್ಥೆ ಜೀವಂತ ಇದೆಯಾ ಎಂಬ ಸಂಶಯ ಎಲ್ಲರಲ್ಲಿ ಮನೆಮಾಡುತ್ತಿದೆ.

ಕರ್ನಾಟಕದಲ್ಲಿ ಹೆಣ್ಮಕ್ಕಳು, ವಿದ್ಯಾರ್ಥಿಗಳ ಜೀವಕ್ಕೆ ಸುರಕ್ಷತೆ ಇಲ್ಲವಾಗಿದೆ. ದಲಿತರ ಮನೆಗೆ ನುಗ್ಗಿ ಪೋಷಕರ ಸಮ್ಮುಖದಲ್ಲೇ ಒಬ್ಬ ದಲಿತ ಯುವಕನನ್ನು ಮರ್ಮಾಂಗಕ್ಕೆ ಒದ್ದು, ಕತ್ತು ಹಿಸುಕಿ ಸಾಯಿಸುವ ಘಟನೆ ಈ ಕರ್ನಾಟಕದಲ್ಲಿ ನಡೆದಿದೆ ಎಂದರು.

ಯಾದಗಿರಿಯಲ್ಲಿ ಮೊನ್ನೆ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದೆ. ರಾಕೇಶ್ ಅವರ ಹತ್ಯೆಯಾಗಿದೆ; ಆದರೆ, ನಿನ್ನೆ ಮಧ್ಯಾಹ್ನ 1 ಗಂಟೆಗೆ ಎಫ್‍ಐಆರ್ ದಾಖಲಾಗಿದೆ. ಕಾನೂನು- ಸುವ್ಯವಸ್ಥೆ ಈ ರಾಜ್ಯದಲ್ಲಿ ಜೀವಂತ ಇದೆಯೇ ಎಂದು ಪ್ರಶ್ನಿಸಿದರು.

ಒಬ್ಬ ದಲಿತ ಯುವಕನ ಕೊಲೆಯನ್ನು ಮುಚ್ಚಿ ಹಾಕುವ ಕೆಲಸ ಈ ರಾಜ್ಯದಲ್ಲಿ ನಡೆದಿದೆಯಲ್ಲವೇ? ಒಬ್ಬ ದಲಿತನ ಹತ್ಯೆಯಾಗಿ 14 ಗಂಟೆ ವರೆಗೆ ಎಫ್‍ಐಆರ್ ಮಾಡಲು ಪೊಲೀಸ್ ಇಲಾಖೆಗೆ ಸಾಧ್ಯವಿಲ್ಲವೆಂದಾದರೆ ದಲಿತ ಸಮುದಾಯದಿಂದ ಬಂದ ಗೃಹ ಸಚಿವರು ಯಾವ ಮಾನ ಮರ್ಯಾದೆ ಇಟ್ಟುಕೊಂಡು ತಮ್ಮ ಸಚಿವ ಸ್ಥಾನದ ಬಗ್ಗೆ ಹೇಳುತ್ತಾರೆ? ಯಾವ ಮುಖವನ್ನು ದಲಿತರಿಗೆ ತೋರಿಸುತ್ತೀರಿ ಎಂದು ಕೇಳಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!