Ad imageAd image

ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಕರ್ನಾಟಕ ಹನಿ ಟ್ರ್ಯಾಪ್‌ ಪ್ರಕರಣ

Bharath Vaibhav
ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಕರ್ನಾಟಕ ಹನಿ ಟ್ರ್ಯಾಪ್‌ ಪ್ರಕರಣ
supreme court of india
WhatsApp Group Join Now
Telegram Group Join Now

ನವದೆಹಲಿ: ಕರ್ನಾಟಕ ವಿಧಾನಸಭೆಯಲ್ಲಿ ಭಾರೀ ಗದ್ದಲ ಎಬ್ಬಿಸಿರುವ ಹನಿಟ್ರ್ಯಾಪ್‌ ಪ್ರಕರಣ ಇದೀಗ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಹನಿ ಟ್ರ್ಯಾಪ್‌ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.

ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಅರ್ಜಿದಾರರು ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಬಳಿ ಮನವಿ ಮಾಡಿದ್ದಾರೆ. ಶೀಘ್ರವೇ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ಒಪ್ಪಿದೆ. ವಿಷಯವನ್ನು ಇಂದು ಅಥವಾ ನಾಳೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಜೆಐ ತಿಳಿಸಿದ್ದಾರೆ.

ಕರ್ನಾಟಕದ ಹನಿ ಟ್ರ್ಯಾಪಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಸಚಿವರು ಮತ್ತು ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ 48 ಜನರು ಸಿಲುಕಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಕರ್ನಾಟಕ ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ವಿಧಾನಸಭೆ ಅಧಿವೇಶನದಲ್ಲಿ ಹನಿಟ್ರ್ಯಾಪ್​ನಲ್ಲಿ ತಮ್ಮನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಬಹಿರಂಗಪಡಿಸಿದ ನಂತರ ವಿವಾದ ಭುಗಿಲೆದ್ದಿದೆ.

WhatsApp Group Join Now
Telegram Group Join Now
Share This Article
error: Content is protected !!