Ad imageAd image

ಬೇಸಿಗೆ ರಜೆ ಮುಗಿಸಿ  ಶಾಲೆಗೆ ಬಂದ ಮಕ್ಕಳಿಗೆ ,ಹೂ ಗುಚ್ಛ ನೀಡಿ ಮಕ್ಕಳನ್ನು ಸ್ವಾಗತಿಸಿದ ಕರ್ನಾಟಕ ಪಬ್ಲಿಕ್ ಶಾಲೆ

Bharath Vaibhav
ಬೇಸಿಗೆ ರಜೆ ಮುಗಿಸಿ  ಶಾಲೆಗೆ ಬಂದ ಮಕ್ಕಳಿಗೆ ,ಹೂ ಗುಚ್ಛ ನೀಡಿ ಮಕ್ಕಳನ್ನು ಸ್ವಾಗತಿಸಿದ ಕರ್ನಾಟಕ ಪಬ್ಲಿಕ್ ಶಾಲೆ
WhatsApp Group Join Now
Telegram Group Join Now

ಚಾಮರಾಜನಗರ :-ಯಳಂದೂರು.ಬೇಸಿಗೆ ರಜೆ ಮುಗಿದಿದ್ದು, ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಶುರುವಾಗಿವೆ.ಬುಧವಾರದಿಂದ 2024-2025ನೇ ಸಾಲಿನ ಶೈಕ್ಷಣಿಕ ಅವಧಿ ಆರಂಭವಾಗಿದೆ.

ಕಳೆದ 2 ತಿಂಗಳಿಂದ ಬೇಸಿಗೆ ರಜೆಯಿಂದ ಬಂದ್ ಆಗಿದ್ದ ಶಾಲೆಗಳು ಇಂದಿನಿಂದ ಓಪನ್ ಆಗಿವೆ,ಹಲವು ಖಾಸಗಿ ಶಾಲೆಗಳು ಈಗಾಗಲೇ ತರಗತಿಗಳನ್ನು ಆರಂಭಿಸಿದ್ದು,ಇಂದು ಸರ್ಕಾರಿ ಶಾಲೆಗಳು ಅಧಿಕೃತವಾಗಿ ಪುನರಾರಂಭಗೊಂಡಿದೆ.ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಜಾ ಮುಗಿಸಿಕೊಂಡು ವಾಪಸ್ ಆಗಿರುವ ಚಿಣ್ಣರಿಗೆ, ಶಾಲಾ ಪ್ರಾರಂಭೋತ್ಸವದ ಮೂಲಕ ಹೂ ಗುಚ್ಚ ಹಾಗೂ ಸಿಹಿ ನೀಡಿ ಶಿಕ್ಷಕರು ಬರಮಾಡಿಕೊಂಡಿದ್ದಾರೆ.

ಈ ಬಗ್ಗೆ ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲರಾದ ನಂಜುಂಡಯ್ಯ ರವರು ಮಾತನಾಡಿ  ಶಾಲೆಗಳಲ್ಲಿ ಪ್ರತಿಯೊಂದು ತರಗತಿ ಕೊಠಡಿ, ಹೊರಾಂಗಣ, ಬಿಸಿಯೂಟ ಕೊಠಡಿ, ಆಟದ ಮೈದಾನ, ಕಾಂಪೌಂಡ್ ಸೇರಿದಂತೆ ಶಾಲೆಯನ್ನು ಉತ್ತಮ ರೀತಿಯಲ್ಲಿ ಸ್ವಚ್ಛಗೊಳಿಸಲಾಗಿದೆ,ಮಕ್ಕಳು ಶಾಲೆಗೆ ಬರುತ್ತಿದ್ದಂತೆ ಅವರಿಗೆ ಹೂವು, ಚಾಕೊಲೇಟ್ ನೀಡಿ ಸ್ವಾಗತ ನೀಡಲಾಗಿಯಿತು.ಈಗಾಗಲೇ ಮಕ್ಕಳಿಗೆ ಸಮವಸ್ತ್ರ ಪೂರ್ಣ ಪ್ರಮಾಣದಲ್ಲಿ ಶಾಲೆಗೆ ರವಾನೆಯಾಗಿದ್ದು, ಪಠ್ಯಪುಸ್ತಕಗಳನ್ನು ಕೂಡ ಸರಬರಾಜು ಮಾಡಲಾಗಿದೆ,

ಶಾಲೆ ಆರಂಂಭವಾದ ಮೊದಲ ಮೂರು ದಿನ ಅವರೊಂದಿಗೆ ಮಾತುಕತೆ, ಚರ್ಚೆ ನಡೆಸಬೇಕು. ಇದರಿಂದ ಅವರ ನೈತಿಕತೆ ಹೆಚ್ಚಾಗುತ್ತದೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತಮವಾಗಿ ತೊಡಗಿಸಿಕೊಳ್ಳಲು ಸಹಾಯ ಮಾಡುತ್ತದೆ, ಈ ಈ ದಿನ ಆಗಮಿಸಿದ ವಿದ್ಯಾರ್ಥಿಗಳನ್ನು ನಮ್ಮ ಎಲ್ಲಾ ಶಿಕ್ಷಕ ವೃಂದದವರು ನಗುಮುಖದಿಂದ ಮಕ್ಕಳನ್ನು ಸ್ವಾಗತಿಸಲಾಯಿತು ಎಂದು ತಿಳಿಸಿದರು.

ವರದಿ : ಸ್ವಾಮಿ ಬಳೇಪೇಟೆ 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!