ಚಿಂಚೋಳಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಲಕೋಡ ಗ್ರಾಮದ ಜನಿಸಿದ ಸಂಜೀವಕುಮಾರ್ ಪಾಟೀಲ್ ಅವರಿಗೆ ಕರ್ನಾಟಕ ಪ್ರೆಸ್ ಕ್ಲಬ್ ನ 2025ನೇ ವಾರ್ಷಿಕ ಪ್ರಶಸ್ತಿ ಆಯ್ಕೆಯಾಗಿ ಪುರಸ್ಕಾರ ಮಾಡಲಾಯಿತು ಇವರು ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ವೀರಶೈವ ಲಿಂಗಾಯತ ಸಮಾಜದ ತಾಲೂಕು ಅಧ್ಯಕ್ಷರು ಹಾಗೂ ಪತ್ರಕರ್ತರಾದ ಸಂಜೀವಕುಮಾರ್ ಪಾಟೀಲ್ ಅವರಿಗೆ ಕರ್ನಾಟಕ ರಾಜ್ಯ ಯುವ ರತ್ನ ಪ್ರಶಸ್ತಿಯನ್ನು ಕನ್ನಡ ಚಲನಚಿತ್ರದ ಹಿರಿಯ ನಟಿರಾದ ಶೃತಿ ಅವರು ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಡಾ.ಶ್ರೀ ಸಿದ್ದರಾಜು ಸ್ವಾಮೀಜಿಗಳು ಪಾಲನಹಳ್ಳಿ ಮಠ, ಕರ್ನಾಟಕ ಸರ್ಕಾರದ ದೇವರಾಜ್ ಅರಸು ನಿಗಮದ ಅಧ್ಯಕ್ಷರಾದ ಕೀರ್ತಿ ಗಣೇಶ, ಬೆಂಗಳೂರಿನ ಸಮಾಜ ಸೇವಕರದ ಮಹೇಂದ್ರ ಮುನ್ನೋಟ್,ರವಿ ಮಾಹಾದೇವ್, ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯಾಧ್ಯಕ್ಷರಾದ ದಯಾನಂದ ಎಂ,ಹಾಗೂ ಕರ್ನಾಟಕ ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿಗಳಾದ ರಮೇಶ ಎಸ್. ಜಿ, ಕರ್ನಾಟಕ ಪ್ರೆಸ್ ಕ್ಲಬ್ ಮುಖ್ಯಸ್ಥರದ ಗಂಗಾಧರ,ಮತ್ತು ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ: ಸುನಿಲ್ ಸಲಗರ