———————————–ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

ವೆಸ್ಟ್ ವಿಂಡೀಸ್ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ಸರಣಿಗೆ ಭಾರತ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದ್ದು, ಕನ್ನಡಿಗ ಕರುಣ್ ನಯ್ಯರ ಅವರನ್ನು ಕೈ ಬಿಡಲಾಗಿದೆ. ಆದರೆ ಕನ್ನಡಿಗರಾದ ಕೆ.ಎಲ್. ರಾಹುಲ್, ದೇವದತ್ತ ಪೆಡಿಕಲ್ ಹಾಗೂ ಪ್ರಸಿದ್ಧ ಕೃಷ್ಣ 15 ಸದಸ್ಯರ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದಾರೆ.
ತಂಡ ಇಂತಿದೆ: ಶುಭಮಾನ್ ಗಿಲ್ ( ನಾಯಕ) ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್, ಸಾಯಿ ಸುದರ್ಶನ್, ದೇವದತ್ತ ಪೆಡಿಕಲ್, ದ್ರುವ್ ಜುರೇಲ್, ರವೀಂದ್ರ ಜಡೆಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬೂಮ್ರಾ, ಅಕ್ಷರ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಎನ್. ಜಗದೀಶನ್, ಮೊಹ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಕುಲದೀಪ್ ಯಾದವ್.




