ಬೆಳಗಾವಿ : ಜಿಲ್ಲಾ ಉಸ್ತುವರಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿಯವರ ನೇತೃತ್ವದಲ್ಲಿ ಕೆ.ಡಿ.ಪಿ. ಸಭೆ.

ಈ ವೇಳೆ ಆರೋಗ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶುಪಾಲನಾ, ಅರಣ್ಯ, ರೇಷ್ಮೇ ಮೀನುಗಾರಿಕೆ ಸೇರಿದಂತೆ ವಿವಿಧ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನ ಮತ್ತು ಭವಿಷ್ಯದ ಕ್ರಮಗಳ ಕುರಿತು ವಿವರವಾದ ಚರ್ಚೆ ನಡೆಸಿ, ಯೋಜನೆಗಳು ಹೆಚ್ಚು ಪಾರದರ್ಶಕವಾಗಿ ಮತ್ತು ಸಮಯಕ್ಕೆ ಅನುಗುಣವಾಗಿ ಕಾರ್ಯಗತಗೊಳ್ಳುವಂತೆ ನಿರ್ದೇಶನಗಳನ್ನು ನೀಡಲಾಯಿತು. ನಂತರ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸತ್ಕರಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಮುಹಮ್ಮದ್ ರೋಷನ್, ಶಾಸಕರಾದ ಆಸೀಫ್ ಸೇಠ್, ದುರ್ಯೋಧನ ಐಹೊಳೆ, ಗಣೇಶ ಹುಕ್ಕೇರಿ, ವಿಶ್ವಾಸ ವೈದ್ಯ, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಇನ್ನುಳಿದ ಜಿ.ಪಂ. ಸಿಇಓ ರಾಹುಲ್ ಶಿಂಧೆ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.
ವರದಿ : ರಾಜು ಮುಂಡೆ




