ನವದೆಹಲಿ : ಫೆಬ್ರವರಿ 2025 ರಲ್ಲಿ ದಿಲ್ಲಿ ಎಲೆಕ್ಷನ್ ನಡೆಯಲಿದೆ. ಈಗಾಗಲೇ ಆಪ್ ಸಿದ್ಧತೆ ಆರಂಭಿಸಿದೆ. ಈ ಬಾರಿ ಸ್ವತಂತ್ರವಾಗಿ ಚುನಾವಣೆ ಎದುರಿಸಲು ಆಪ್ ಸಜ್ಜಾಗಿದೆ.
ಈ ಬಗ್ಗೆ ದಿಲ್ಲಿ ಮಾಜಿ ಸಿಎಂ ಹಾಗೂ ಆಪ್ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ , ಟ್ವೀಟ್ ಮಾಡಿ ಸ್ಪಷ್ಟವಾಗಿ ರಾಜಕೀಯ ಸಂದೇಶ ರವಾನಿಸಿದ್ದಾರೆ.
ಈ ಬಾರಿ ಆಪ್ ಪ್ರತ್ಯೇಕವಾಗಿ ಚುನಾವಣೆ ಎದುರಿಸುತ್ತದೆ. ಕಾಂಗ್ರೆಸ್ ಅಥವಾ ಯಾವುದೇ ಪಕ್ಷಗಳ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕೇಜ್ರಿವಾಲ್ ಪೋಸ್ಟ್ ಮಾಡಿದ್ದಾರೆ.
ಅಪ್ ತನ್ನ ಸ್ವಂತ ಶಕ್ತಿ ಹಾಗೂ ಸಾಮರ್ಥ್ಯದ ಮೇಲೆ ಎಲೆಕ್ಷನ್ ನಡೆಸಲಿದೆ. ಮುಂದಿನ ಎಲೆಕ್ಷನ್ ಅತ್ಯಂತ ಮಹತ್ವದ ಚುನಾವಣೆಯಾಗಿದ್ದು, ಏಕಾಂಗಿಯಾಗಿ ಹೋರಾಡಲಿದೆ ಎಂದು ಬರೆದುಕೊಂಡಿದ್ದಾರೆ.