ಬೆಂಗಳೂರು : ಕೇರಳಿಗರ ಚೇಟಾ ಸಿಎಂ ಸಿದ್ದರಾಮಯ್ಯ , 30 ಲಕ್ಷಕ್ಕೂ ಹೆಚ್ಚು ಬಡಕನ್ನಡಿಗರಿಗೆ ಸೂರಿಲ್ಲ. ವಸತಿ ರಹಿತ ಕನ್ನಡಿಗರಿಗೆ ಮಿಡಿಯದ ಮಾನವೀಯತೆ, ಕೇರಳದ ಅಕ್ರಮ ವಲಸಿಗರಿಗೆ ಮಿಡಿಯುತ್ತಿರುವ ಇಬ್ಭಗೆ ನೀತಿಗೆ ಧಿಕ್ಕಾರವಿರಲಿ. ಹೀಗಂತ ಜೆಡಿಎಸ್ ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ ನಡೆಸಿದೆ.
ಇದೊಂದು ಪ್ರಕರಣಕ್ಕೆ ಮಾತ್ರಸೀಮಿತ” ಎಂದುತಿಪ್ಪೇಸಾರುವ ಕೇರಳಿಗರ ಚೇಟಾ @siddaramaiahವಸತಿ ರಹಿತ ಕನ್ನಡಿಗರಿಗೆ ಮಿಡಿಯದ ಮಾನವೀಯತೆ, ಕೇರಳದ ಅಕ್ರಮ ವಲಸಿಗರಿಗೆ ಮಿಡಿಯುತ್ತಿರುವ ಇಬ್ಭಗೆನೀತಿಗೆಧಿಕ್ಕಾರವಿರಲಿ. ಹೈಕಮಾಂಡ್ ಆರ್ಡರ್ ಅನ್ನು ತಲೆಬಾಗಿ, ಕುರ್ಚಿ ಕಳೆದುಕೊಳ್ಳುವ ಭೀತಿಯಲ್ಲಿ ಅಕ್ರಮ ವಲಸಿಗರ ಪರವಾಗಿ, ತರಾತುರಿಯಲ್ಲಿ ಸಭೆಗಳನ್ನು ನಡೆಸಿ ಆದೇಶ ಹೊರಡಿಸಿ, ವಸತಿ ರಹಿತ ಕನ್ನಡಿಗರಿಗೆ ಬಗೆದ ವಿಶ್ವಾಸದ್ರೋಹವಲ್ಲವೇ ?
ಕರ್ನಾಟಕದಲ್ಲಿಸುಮಾರು30 ಲಕ್ಷಕ್ಕೂ ಹೆಚ್ಚು ವಸತಿ ರಹಿತ ಬಡಕನ್ನಡಿಗರಿಗೆ ಸೂರಿಲ್ಲ. ವಸತಿ ಇಲಾಖೆಯ ಮನೆ ಹಂಚಿಕೆಗಾಗಿ ಅರ್ಜಿ ಸಲ್ಲಿಸಿ ಲಕ್ಷಾಂತರ ಜನರು ಹಗಲು ರಾತ್ರಿ ದುಡಿದ ಹಣವನ್ನು ಮುಂಗಡ ಕಟ್ಟಿ, ವರ್ಷಾನುಗಟ್ಟಲೇ ಇನ್ನೂ ಕಾಯುತ್ತಿದ್ದಾರೆ. ಇಂತಹ ನಿರ್ಗತಿಕರಿಗೆ ಮನೆಗಳನ್ನು ನೀಡುವ ಮನಸ್ಸು @INCKarnatakaಸರ್ಕಾರಕ್ಕೆ ಇಲ್ಲವಾಗಿದೆ. ವೋಟ್ ಬ್ಯಾಂಕ್ಗಾಗಿ ಒಂದು ಸಮುದಾಯದ ಓಲೈಕೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷ, ವಸತಿ ಸಚಿವ @BZZameerAhmedK ಕನ್ನಡಿಗರ ತೆರಿಗೆ ಹಣದಲ್ಲಿ ವಲಸಿಗರಿಗೆ 11.20 ಲಕ್ಷ ರೂ ವೆಚ್ಚದ ಮನೆಗಳನ್ನು ನೀಡಿ, ರಾಜ ಮಾರ್ಯಾದೆ ಕೊಡುತ್ತಿರುವುದು ರಾಜ್ಯದ ಜನರಿಗೆ ಮಾಡುತ್ತಿರುವ ವಂಚನೆ ಎಂದು ಜೆಡಿಎಸ್ ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ ನಡೆಸಿದೆ.




