ಕಲಬುರಗಿ: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು 11 ವರ್ಷಗಳಲ್ಲಿ 36 ತಪ್ಪುಗಳನ್ನು ಮಾಡಿದ. ಮೋದಿ ಅವರಂತೆ ಪದೇ ವದೇ ಸುಳ್ಳು ಹೇಳಿ, ಇಷ್ಟೊಂದು ತಪ್ಪುಗಳನ್ನು ಮಾಡಿ, ಜನರನ್ನು ದಾರಿ ತಪ್ಪಿಸಿ, ಯುವಕರನ್ನು ಮೋಸಗೊಳಿಸುವ ಪ್ರಧಾನಿಯನ್ನು ನಾನು ಹಿಂದೆಂದೂ ನೋಡಿಲ್ಲ’ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.
ನಗರದಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ನನ್ನ 65 ವರ್ಷಗಳ ರಾಜಕೀಯ ಜೀವನ ಮತ್ತು 55 ವರ್ಷಗಳ ಅಧಿಕಾರದಲ್ಲಿ ಇದ್ದಾಗ ಮೋದಿ ಅವರಂತಹ ಪ್ರಧಾನಿಯನ್ನು ನಾನು ಕಂಡಿಲ್ಲ. ತಾವು ಮಾಡಿದ ತಪ್ಪುಗಳನ್ನು ಒಪ್ಪಿಕೊಳ್ಳುವುದಿಲ್ಲ ಕಮೆ ಸಹ ಯಾಚಿಸುವುದಿಲ್ಲ’ ಎಂದು ಟೀಕಿಸಿದರು.
‘ಕಾಶ್ಮೀರ ಕಣಿವೆಯಲ್ಲಿ ರೈಲ್ವೆ ಸಂಪರ್ಕ ಜಾಲ ವಿಸ್ತರಿಸುವಲ್ಲಿ ಈ ಹಿಂದಿನ ಸರ್ಕಾರಗಳು ನೀಡಿದ ಕೊಡುಗೆಗಳನ್ನು ಸ್ಮರಿಸುವಲ್ಲಿ ಪ್ರಧಾನಿ ಮೋದಿ ಅವರು ವಿಫಲರಾಗಿದ್ದಾರ. ಕಣಿವ ರಾಜ್ಯದಲ್ಲಿ ರೈಲ್ವೆ ಯೋಜನೆಗಳನ್ನು ಮಾಜಿ ಪುಧಾನಿ ಪಿ.ವಿ. ನರಸಿಂಹ ರಾವ್ ಆರಂಭಿಸಿದರು. ಅಟಲ್ ಬಿಹಾರಿ ವಾಜಪೇಯಿ ಅವುಗಳನ್ನು ಇನ್ನಷ್ಟು ಮುಂದವರಿಸಿಕೊಂಡು ಬಂದರು. ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ 10 ವರ್ಷಗಳ ಅವಧಿಯಲ್ಲಿ ಹೆಚ್ಚಿನ ಆದ್ಯತೆ ನೀಡಿತ್ತು. ಮನಮೋಹನ್ ಸಿಂಗ್,ಸೋನಿಯಾ ಗಾಂಧಿ, ನಾನು ಸೇರಿದಂತೆ ಹಲವರು ಕಾಶ್ಮೀರಕ್ಕೆ ತೆರಳಿ ಚಾಲನೆ ನೀಡಲಿದ್ದೇವೆ’ ಎಂದು ಉದ್ಘಾಟನೆಗೆ ತೆರಳಿದ್ದು, ಫೋಟೊಗಳನ್ನು ಪ್ರದರ್ಶಿಸಿದರು.




