ಚಿಕ್ಕೋಡಿ: ಪುರಸಭೆಯಲ್ಲಿ ಇಂದು ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಶಾಸಕರಾದ ಶ್ರೀ ಗಣೇಶ ಅಣ್ಣಾ ಹುಕ್ಕೇರಿ ಅವರು ಭಾಗವಹಿಸಿ, ಪಟ್ಟಣದ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಮಹತ್ವದ ಚರ್ಚೆ ನಡೆಸಿದರು.
ಈ ಸಂದರ್ಭ ಅವರು ಚಿಕ್ಕೋಡಿ ಪಟ್ಟಣದ ಮೂಲಭೂತ ಸೌಕರ್ಯಗಳ ಬಗ್ಗೆ ತೀವ್ರ ಗಮನ ಹರಿಸಿ, ವಿದ್ಯುತ್ ಸಮಸ್ಯೆ ಶೀಘ್ರ ಪರಿಹಾರವಾಗಬೇಕು, ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಒದಗಿಸಬೇಕು, ಹಾಗೂ ರಸ್ತೆಗಳ ದುರಸ್ಥಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬುದು ಸೇರಿದಂತೆ ಪ್ರಮುಖ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.
ನಮ್ಮ ಚಿಕ್ಕೋಡಿಯ ಜನತೆ ಯಾವುದೇ ತೊಂದರೆಗೆ ಒಳಗಾಗಬಾರದು. ನೀರು, ವಿದ್ಯುತ್, ರಸ್ತೆ, ಸ್ವಚ್ಛತೆ—ಈ ಎಲ್ಲಾ ಮೂಲಭೂತ ಈಸೌಲಭ್ಯಗಳ ಅಭಿವೃದ್ಧಿಯ ಬಗ್ಗೆ ನಾನು ಹಾಗೂ ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಶ್ರೀ ಪ್ರಕಾಶ ಅಣ್ಣಾ ಹುಕ್ಕೇರಿ ಅವರು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ,” ಎಂದು ಭರವಸೆ ನೀಡಿದರು. ಈ ವೇಳೆ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ರಾಜು ಮುಂಡೆ