—————————————————–ಪೂರ್ವಭಾವಿ ಸಭೆಯಲ್ಲಿ ಸಿದ್ದತೆ ಕುರಿತು ಚರ್ಚೆ
ಕಿತ್ತೂರು: ಹೌದು ಬೆಳಗಾವಿ ಜಿಲ್ಲೆಯ ಕ್ರಾಂತಿನೆಲ ಚನ್ನಮ್ಮ ಕಿತ್ತೂರು ನಲ್ಲಿ 201 ನೇ ಚನ್ನಮ್ಮನ ಕಿತ್ತೂರು ವಿಜಯೋತ್ಸವದ ಸಂಭ್ರಮ. ಇದೇ ತಿಂಗಳು 23, 24 ಹಾಗೂ 25 ರಂದು ಅದ್ದೂರಿಯಾಗಿ ನಡೆಸಲು ಎಲ್ಲಾ ಗಣ್ಯರು, ಅಧಿಕಾರಿಗಳು ಹಾಗೂ ಚನ್ನಮ್ಮನ ಅಭಿಮಾನಿಗಳ ಸಮ್ಮುಖದಲ್ಲಿ ತೀರ್ಮಾನ ಮಾಡಲಾಯಿತು.

ಕಲ್ಮಠ ಶ್ರೀಗಳ ಸಾನಿಧ್ಯದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಶಾಸಕ ಬಾಬಾಸಾಹೇಬ್ ಪಾಟೀಲ್ ಅಧ್ಯಕ್ಷತೆಯಲ್ಲಿ, ಜಿಲ್ಲಾಧಿಕಾರಿ ಮಹಮದ್ ರೋಷನ್, ಎಸ್.ಪಿ ಭೀಮಾ ಶಂಕರ ಗುಲೆದ್, ಸಿ.ಇ. ಓ ರಾಹುಲ್ ಶಿಂದೆ ಹಾಗೂ Ac ಪ್ರವೀಣ್ ಜೈನ್ ಹಾಗೂ pwd ಕಾರ್ಯ ನಿರ್ವಾಹಕ ಅಭಿಯಂತರರು ಆದ ಎಸ್.ಎಸ್ ಸೊಬರದ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಉಪ ನಿರ್ದೇಶಕರು ಆದ ವಿದ್ಯಾವತಿ ಭಜಂತ್ರಿ ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆದ ಈ ಪೂರ್ವಭಾವಿ ಸಭೆಯಲ್ಲಿ ಅರ್ಥಪೂರ್ಣವಾಗಿ ಆಚರಣೆ ಮಾಡಲು ನಿರ್ದಾರ ಮಾಡಲಾಯಿತು.
ಈ ಸಂದರ್ಭದಲ್ಲಿ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ನಡೆಸಿದ ಸಂವಾದದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸತೀಶ್ ಜಾರಕಿಹೊಳಿ ಕಿತ್ತೂರು ಉತ್ಸವ ಹಾಗೂ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಹಾಗೂ ನವೆಂಬರ್ ಕ್ರಾಂತಿ ಬಗ್ಗೆ ಮಾತನಾಡಿದ್ದಾರೆ.
ಇದೇ ಸಂದರ್ಭದಲ್ಲಿ ಕಿತ್ತೂರು ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಹಾಗೂ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಕಿತ್ತೂರು ಚನ್ನಮ್ಮ ಸಾರಿಗೆ ಸಂಸ್ಥೆ ಹೆಸರನ್ನು ಇಡಲು ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.
ವರದಿ: ಬಸವರಾಜು




