Ad imageAd image

ಕಿತ್ತೂರು : ಯೂಟ್ಯೂಬ್ ನೋಡಿ ಹೆರಿಗೆ ಮಾಡಿಕೊಂಡ ಯುವತಿ – ಲವರ್ ಜೊತೆ ಸೇರಿ ಮಗು ಹತ್ಯೆ 

Bharath Vaibhav
ಕಿತ್ತೂರು : ಯೂಟ್ಯೂಬ್ ನೋಡಿ ಹೆರಿಗೆ ಮಾಡಿಕೊಂಡ ಯುವತಿ – ಲವರ್ ಜೊತೆ ಸೇರಿ ಮಗು ಹತ್ಯೆ 
WhatsApp Group Join Now
Telegram Group Join Now

ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಬೆಳಗಾವಿಯಲ್ಲಿ ಮದುವೆಗೆ ಮುನ್ನ ಗರ್ಭಿಣಿಯಾದ ಹೆಣ್ಣು ಮಗುವನ್ನು ಕೊಂದು ತಿಪ್ಪೆಗೆಸೆದ ಪ್ರಕರಣ ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲೆ ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿಯಲ್ಲಿ ಹಸುಗೂಸನ್ನು ಕೊಂದು ತಿಪ್ಪೆಗೆಸೆದ ಪ್ರಕರಣಕ್ಕೆ ಸಂಬಂಧಿದಂತೆ ಪ್ರೇಮಿಗಳಿಬ್ಬರನ್ನು ಬಂಧಿಸಲಾಗಿದೆ.ಮಹಾಬಳೇಶ (31), ಸಿಮ್ರಾನ್ (22) ಬಂಧಿತ ಆರೋಪಿಗಳು.

ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿ ನಿವಾಸಿಗಳಾದ ಮಹಾಬಳೇಶ ಮತ್ತು ಸಿಮ್ರಾನ್ ಇಬ್ಬರೂ ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ವೇಳೆ ಇಬ್ಬರ ನಡುವೆ ದೈಹಿಕ ಸಂಬಂಧ ಏರ್ಪಟ್ಟಿದೆ. ಪರಿಣಾಮ ಸಿಮ್ರಾನ್, ಮದುವೆಗೂ ಮುಂಚೆಯೇ ಗರ್ಭಿಣಿಯಾಗಿದ್ದಾಳೆ.

ಯುವತಿ 20 ದಿನಗಳ ಹಿಂದೆ ಯುಟ್ಯೂಬ್‌ನಲ್ಲಿ ವಿಡಿಯೋ ನೋಡಿಕೊಂಡು ಸೆಲ್ಫ್ ಡೆಲಿವರಿ ಮಾಡಿಕೊಂಡಿದ್ದಾಳೆ ಈ ವೇಳೆ ಆಕೆಗೆ ಹೆಣ್ಣು ಮಗು ಜನಿಸಿದ್ದು, ಅದನ್ನು ಪ್ರಿಯಕರ ಮಹಾಬಳೇಶನ ಕೈಗೆ ನೀಡಿದ್ದಳು. ಆದರೆ, ಆತ ಆ ಹಸುಗೂಸನ್ನು ಹತ್ಯೆ ಮಾಡಿ ತಿಪ್ಪೆಗೆ ಎಸೆದಿದ್ದಾನೆ.

ಮಾ.5ರಂದು ಗ್ರಾಮದ ಮರಿಯಮ್ಮನ ಗುಡಿ ಓಣಿಯ ಬಳಿ ನವಜಾತ ಹೆಣ್ಣು ಹಸುಗೂಸೊಂದು ಪತ್ತೆಯಾಗಿತ್ತು. ಅದನ್ನು ಕೊಲೆ ಮಾಡಿ ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ಎಸೆಯಲಾಗಿದೆ ಎಂದು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮಹಾಬಳೇಶ, ಸಿಮ್ರಾನ್ ಇಬ್ಬರನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!