ದುಬೈ: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಇಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ನ್ಯೂಜಿಲೆಂಡ್ ಪ್ರಮುಖ ಬೌಲರ್ ಕೊರತೆಯಲ್ಲಿ ಕಣಕ್ಕೆ ಇಳಿಯಬೇಕಿದೆ.




