—————————————————–ಮಾದಕ ವಸ್ತುಗಳ ವಿರೋಧಿ ಜನಜಾಗೃತಿ
ಕುರುಗೋಡು: ಯುವಜನತೆ ಮೋಜಿಗಾಗಿ ಮಾದಕ ವ್ಯಸನಿಗಳಾಗಿ ಜೀವನವನ್ನು ಹಾಳು ಮಾಡಿಕೊಳ್ಳದೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕೊಟ್ಟುರು ನಿರಂಜನ ಪ್ರಭು ಸ್ವಾಮೀಜಿ ಹೇಳಿದರು.

ಪಟ್ಟಣದ ನಾಡಗೌಡ ಮರಿಬಸವನಗೌಡ ಸ್ಮಾರಕ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶನಿವಾರ ನಡೆದ ಪೋಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆ ಹಾಗೂ ತಾಲೂಕು ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರುದ್ಧ ಅಕ್ರಮ ಸಾಗಟ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಸ್ವಾಸ್ಥ್ಯ ಭಾರತದ ನಿರ್ಮಾಣಕ್ಕೆ ಯುವಜನತೆಯ ಪಾತ್ರ ಪ್ರಮುಖವಾಗಿದೆ ವಿದ್ಯಾರ್ಥಿಗಳ ಮನಸ್ಸು
ಹಸಿಗೊಡೆ ಇದಾಂತ ಏನು ಹೇಳುತ್ತೇವೆ ಅದು ಮನಸ್ಸಿಗೆ ನಾಟುತ್ತದೆ ಚಂಚಲ ಮುಕ್ತ ಮನಸ್ಸು ನಿಮ್ಮದಗಬೇಕು.
ಏಕಾಗ್ರತೆ ಮತ್ತು ಶ್ರದ್ಧೆಯಿಂದ ವಿದ್ಯಾಬ್ಯಾಸ ಮಾಡಿ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಯುವಜನತೆಯ ಮುಂದಾಗಬೇಕು ಎಂದು ಕರೆ ನೀಡಿದರು.

ನಂತರ ಡಿವೈಎಸ್ಪಿ ಪ್ರಸಾದ ಗೋಖಲೆ ಮಾತನಾಡಿ ಮಾದಕ ವ್ಯಸನದಿಂದ ಚಿಕ್ಕ ವಯಸ್ಸಿನ ಗಂಬೀರವಾಗಿ ರೋಗದ ಬಾಧೆಗೆ ತುತ್ತಾಗಿ ಸಾವನ್ನಪ್ಪಿದ ಎಷ್ಟೋ ಘಟನೆಗಳು ನಡೆದಿವೆ ಅದರಿಂದ ಮಾದಕ ವಸ್ತುಗಳ ಸೇವನೆ ಮಾಡದೆ ಕುಟುಂಬಕ್ಕೆ ಹಾಗೂ ಸಮಾಜಕ್ಕೆ ಉತ್ತಮ ನಾಗರಿಕರಾಗಿ ಎಂದು ಹೇಳಿದರು.
ಮೊದಲಿಗೆ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಅಕ್ರಮ ಸಾಗಟ ವಿರೋಧಿ ಜನಜಾಗೃತಿ ಜಾಥ ಕಾರ್ಯಕ್ರಮಕ್ಕೆ ಶ್ರೀ ಕೊಟ್ಟರು ನಿರಂಜನ ಪ್ರಭು ಸ್ವಾಮೀಜಿ ಯುವರು ವಿವಿಧ ಇಲಾಖೆಗಳ ಅಧಿಕಾರಿಗಳು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಜಾಥಾಕ್ಕೆ ಚಾಲನೆ ನೀಡಿದರು ನಂತರ ಶ್ರೀ ಸುಂಕ್ಲಮ ದೇವಸ್ಥಾನದಿಂದ ಹೊರಟ ಜಾತ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವೃತ್ತ ಸುತ್ತುವರೆದು ನಂತರ ಶ್ರೀ ದೊಡ್ಡ ಬಸವೇಶ್ವರ ಸ್ವಾಮಿ ದೇವಸ್ಥಾನದಿಂದ ಪುನಃ ಕಾಲೇಜು ಆವರಣದಲ್ಲಿ ಸಮಾರೋಪಗೊಂಡಿತು.
ಕಾರ್ಯಕ್ರಮಕ್ಕೆ ಆಗಮಿಸಿದ ನೂರಾರು ವಿದ್ಯಾರ್ಥಿಗಳಿಗೆ ಶ್ರೀಗಳು ಮಾದಕ ವಸ್ತುಗಳ ವಿರುದ್ಧ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ನರಸಪ್ಪ ಸಿಪಿಐ ವಿಶ್ವನಾಥ ಹಿರೇಗೌಡ ಪಿಎಸ್ಐ ಸುಪ್ರೀತ್ ವಿರುಪಕ್ಷಪ್ಪ ಆರೋಗ್ಯ ಇಲಾಖೆ ಅಧಿಕಾರಿ ಗುರುರಾಜ್, ಪುರಸಭೆ ಅಧ್ಯಕ್ಷ ಶೇಖಣ್ಣ ಉಪಾಧ್ಯಕ್ಷ ಚನ್ನಪಟ್ಟಣ ಮಲ್ಲಿಕಾರ್ಜುನ, ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ಅಧಿಕಾರಿಗಳು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ಆಶಾ ಕಾರ್ಯಕರ್ತೆಯರು ಮತ್ತು ವಿವಿಧ ಶಾಲೆಗಳ ಶಿಕ್ಷಕರು ವಿದ್ಯಾರ್ಥಿಗಳು ಇತರರು ಇದ್ದರು.




