ಧಾರವಾಡ: ಮಲೆನಾಡು ಬಯಲು ಸೀಮೆಯಂತೆ ಆಗಲಿದೆ. ಬಯಲು ಸೀಮೆ ಮಲೆನಾಡಿನಂತೆ ಆಗಲಿದೆ ಎಂಬುದಾಗಿ ಕೋಡಿಮಠದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಶಾಕಿಂಗ್ ಭವಿಷ್ಯ ನುಡಿದಿದ್ದಾರೆ.
ಇಂದು ದಸರಾ ಹಬ್ಬದ ಪ್ರಯುಕ್ತ ಜಂಬೂ ಸವಾರಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದಸರಾದ ನಿಜವಾದಂತ ಅರ್ಥವೆಂದರೇ ದುಷ್ಟ ಶಕ್ತಿಗಳನ್ನು ದೂರ ಮಾಡುವುದು.
ಮನುಷ್ಯನ ಕೋಪ, ತಾಪ, ಆಸೆಗಳನ್ನು ಗೆಲ್ಲುವಂತೆ ಮಾಡುವುದಾಗಿದೆ. ಅಲ್ಲದೇ ಮನುಷ್ಯನಿಗೆ ಶಾಂತಿ, ಸುಖ, ನೆಮ್ಮದಿಗಾಗಿ ದಸರಾವನ್ನು ಆಚರಿಸಲಾಗುತ್ತದೆ ಎಂದರು.
ಸಿಎಂ ಸಿದ್ಧರಾಮಯ್ಯ ಅವರ ಸರ್ಕಾರದ ಬಗ್ಗೆ ಭವಿಷ್ಯ ನುಡಿದಂತ ಅವರು, ಸಂಕ್ರಾಂತಿಯವರೆಗೆ ಯಾವುದೇ ತೊಂದರೆ ಸಿದ್ಧರಾಮಯ್ಯ ಸರ್ಕಾರಕ್ಕೆ ಇಲ್ಲ. ಭಯವೂ ಇಲ್ಲ. ಸಂಕ್ರಾಂತಿ ಬಳಿಕ ಆ ಬಗ್ಗೆ ಭವಿಷ್ಯ ನುಡಿಯುವುದಾಗಿ ಹೇಳಿದರು.
ಇನ್ನೂ ನಾನು ಈ ಹಿಂದೆಯೇ ಹೇಳಿದ್ದೇನೆ. ಅದೇನೆಂದರೇ ಬಯಲು ಸೀಮೆ ಮಲೆನಾಡು ಆಗಲಿದೆ. ಮಲೆನಾಡು ಬಯಲು ಸೀಮೆ ಆಗುತ್ತದೆ ಎಂಬುದಾಗಿ. ಅದರಂತೆ ನಮ್ಮಲ್ಲೀಗ ಬಯಲು ಸೀಮೆ ಮಲೆನಾಡು ಆಗಿದೆ ಎಂಬುದಾಗಿ ಶಾಂಕಿಂಗ್ ಭವಿಷ್ಯ ನುಡಿದರು.




