ಸೇಡಂ: ತಾಲೂಕಿನ ಕೋಲ್ಕುಂದಾ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಆಸ್ಪತ್ರೆಯಲ್ಲಿ ವೈದ್ಯರೇ ಇಲ್ಲ ಆಸ್ಪತ್ರೆಗೆ ಬಂದ ರೋಗಿಗಳು ಯಾರ ಹತ್ತಿರ ತೋರಿಸಿಕೊಳ್ಳಬೇಕು ಎಂದು ತಿಳಿಯುತ್ತಿಲ್ಲ ಹಾಗೂ ಡಿ-ಗ್ರೂಪ್ ಸಿಬ್ಬಂದಿ ಗಳು ಹೋರ ರೋಗಿಗಳಿಗೆ ಮತ್ತು ಬಾಣಂತಿಯರಿಗೆ ಸರಿಯಾಗಿ ಚಿಕಿತ್ಸೆ ನೀಡದೆ, ಸ್ಪಂದಿಸದೆ ಅವಾಚ್ಯ ಶಬ್ದಗಳಿಂದ ಮಾತನಾಡುತ್ತಾರೆ.
ರೋಗಿಗಳು ಆಸ್ಪತ್ರೆಗೆ ಹೋಗಲು ಭಯ ಪಡುವಂತಹ ವಾತಾವರಣ ನಿರ್ಮಾಣವಾಗಿದೆ, ಜೊತೆಗೆ ಆಸ್ಪತ್ರೆಯಲ್ಲಿ ಸರಿಯಾದ ವೈದ್ಯಕೀಯ ಸಲಕರಣೆಗಳ ಸೌಲಭ್ಯ ಕೂಡ ಇಲ್ಲ. ಇದರ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳ ಗಮನಕ್ಕೆ ತಂದರೂ ಕ್ಯಾರೆ ಎನ್ನುತ್ತಿಲ್ಲ.
ಈ ಸಮಸ್ಯೆಯನ್ನ ತಕ್ಷಣ ಬಗೆಹರಿಸಬೇಕು, ಈ ರೀತಿಯ ತಾಲೂಕಿನಲ್ಲಿ ಬರುವಂತಹ ಅನೇಕ ಆಸ್ಪತ್ರೆಗಳಲ್ಲಿ ಸಮಸ್ಯೆಗಳು ಇದಾವೆ ಒಂದು ವೇಳೆ ಆಸ್ಪತ್ರೆಗಳಲ್ಲಿ ಎನಾದರೂ ಅನಾಹುತಗಳು ಆದರೆ ಅದಕ್ಕೆ ತಾಲೂಕ ವೈದ್ಯಾಧಿಕಾರಿಗಳು ಮತ್ತು ಜಿಲ್ಲಾ ವೈದ್ಯಾಧಿಕಾರಿಗಳು ಕಾರಣವಾಗುತ್ತಾರೆ.
ಸಮಸ್ಯೆಗಳನ್ನು ಬಗೆಹರಿಸಿ ತಾಲೂಕಿನಲ್ಲಿ ಬರುವಂತಹ ಆಸ್ಪತ್ರೆಗಳಲ್ಲಿ ಡಿ ಗ್ರೂಪ್ ಸಿಬ್ಬಂದಿ ವರ್ಗದವರಿಗೆ ಎಚ್ಚರಿಕೆ ನೀಡಬೇಕು ಡಾಕ್ಟರ್ ಗಳ ಕೊರತೆಯನ್ನು ನಿವಾರಣೆ ಮಾಡಬೇಕು ಎಂದು ಕೊಲುಕುಂದ ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




