Ad imageAd image

ಕೆಪಿಟಿಸಿಎಲ್ ನಲ್ಲಿ ಖಾಲಿ ಇರುವ 2975 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ 

Bharath Vaibhav
ಕೆಪಿಟಿಸಿಎಲ್ ನಲ್ಲಿ ಖಾಲಿ ಇರುವ 2975 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ 
WhatsApp Group Join Now
Telegram Group Join Now

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ಎನ್ನುವಂತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಬರೋಬ್ಬರಿ 2975 ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್.20 ಕೊನೆಯ ದಿನವಾಗಿದೆ.

ಈ ಕುರಿತಂತೆ ಕೆಪಿಟಿಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2268 ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.

ವಿದ್ಯಾರ್ಹತೆ – ಎಸ್‌ಎಸ್ ಎಲ್ ಸಿ ಅಥವಾ 10ನೇ ತರಗತಿಯ ಸಿಬಿಎಸ್‌ಇ, ಐಸಿಎಸ್‌ಇ ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತ ಅಭ್ಯರ್ಥಿಗಳು ಮಾತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು.

ಆಯ್ಕೆಯ ವಿಧಾನ- ಸಹನ ಶಕ್ತಿ ಪರೀಕ್ಷೆಯ ಕನಿಷ್ಠ ಮೂರು ಸ್ಪರ್ಧೆಗಳಲ್ಲಿ ಅರ್ಹತೆ ಹೊಂದಿರುವಂತ ಅಭ್ಯರ್ಥಿಗಳನ್ನು ಎಸ್ ಎಸ್ ಎಲ್ ಸಿ ಅಥವಾ 10ನೇ ತರಗತಿ ಪರೀಕ್ಷೆಯ ವಿದ್ಯಾರ್ಹತೆಯಲ್ಲಿ ಗಳಿಸಿರುವ ಶೇಕಡವಾರು ಅಂಕಗಳ ಜ್ಯೇಷ್ಠೆತೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು – ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 21-10-2024ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-11-2024 ಆಗಿರುತ್ತದೆ. ದಿನಾಂಕ 25-11-2024 ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ.

ಅರ್ಜಿ ಶುಲ್ಕ ವಿವರ- ಸಾಮಾನ್ಯ ವರ್ಗ, ಪ್ರವರ್ಗ-1, 2ಎ, 2ಬಿ, 3ಎ, 3ಬಿ ವರ್ಗದವರಿಗೆ ರೂ.614. ಎಸ್ಸಿ, ಎಸ್ಟಿ ವರ್ಗದವರಿಗೆ ರೂ.378. ವಿಕಲಚೇತನರಿಗೆ ಶುಲ್ಕ ಪಾವತಿಯಿಂದ ವಿನಾಯ್ತಿ ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ – https://kptcl.karnataka.gov.in ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!