ಲಿಂಗಸೂರು : ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಗ್ಗಿಲ್ಲದೆ ಹಳ್ಳಿ ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟದ ವಿರುದ್ಧ ಜನರಿಗೆ ಜಾಗೃತಿ ಮೂಡಿಸಿ ಮದ್ಯ ಮುಕ್ತ ಕಲ್ಯಾಣ ಕರ್ನಾಟಕದ ನಿರ್ಮಾಣಕ್ಕೆ ಕೆ ಆರ್ ಎಸ್ ಪಕ್ಷದ ವತಿಯಿಂದ ಇಂದು ಲಿಂಗಸೂರು ತಾಲೂಕಿನ ಗುರುಗುಂಟ ಗ್ರಾಮದಲ್ಲಿ ಅರಿವಿನ ಕ್ರಾಂತಿ (ಕುಡಿತ ಬಿಡಿಸಿ ಸಂಸಾರ ಉಳಿಸಿ) ಕಾರ್ಯಕ್ರಮ ನಡೆಯಿತು.
ಬೆಳಿಗ್ಗೆ ಗುರುಗುಂಟದ ಬಸ್ ನಿಲ್ದಾಣದಿಂದ ಪಕ್ಷದ ನೂರಾರು ಸೈನಿಕರ ನೇತೃತ್ವದಲ್ಲಿ ಆರಂಭವಾದ ಜಾಥಾವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸರಾಯಿ ಬೇಡ,ಶಿಕ್ಷಣ ಬೇಕು.ನಮಗೆ ಬೀರು ಬೇಡ,ನೀರು ಬೇಕು. ಎಂಬ ಘೋಷಣೆ ಕೂಗುತ್ತಾ ಅಕ್ರಮವಾಗಿ ಮದ್ಯ ಮಾರುವ ಅಂಗಡಿಗಳಿಗೆ ಭೇಟಿ ಮಾಡಿ ಅಕ್ರಮ ಮದ್ಯ ಮಾರುವುದನ್ನು ನಿಲ್ಲಿಸುವಂತೆ ಅಂಗಡಿ ಮಾಲೀಕರಿಗೆ ಮನವಿ ಮಾಡಲಾಯಿತು.
ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ಗೌರವಾಧ್ಯಕ್ಷರಾದ ಶ್ರೀ ರವಿ ಕೃಷ್ಣಾರೆಡ್ಡಿ ಅವರು ರಾಜ್ಯದಲ್ಲಿ ನಮ್ಮನ್ನು ಆಳುವ ಯಾವುದೇ ಸರ್ಕಾರಗಳು ಜಾರಿ ಮಾಡುತ್ತಿರುವ ಯಾವುದೇ ಜನ ಕಲ್ಯಾಣದ ಯೋಜನೆಗಳು ವಿಶೇಷವಾಗಿ ಬಡತನ ನಿರ್ವಣೆಯಂತಹ ವಿಶೇಷ ಯೋಜನೆಗಳು ಗಣನೀಯವಾಗಿ ಫಲ ನೀಡದೇ ಇರುವ ಕಾರಣ ಕಲ್ಯಾಣ ಕರ್ನಾಟಕದ ಹಳ್ಳಿ ಹಳ್ಳಿಗಳಲ್ಲಿ ಮದ್ಯ ಮಾರಾಟ ನಡೆಯುತ್ತಿದ್ದು ಇದರಿಂದಾಗಿ ಮಹಿಳೆಯರು,ಯುವಕರು,ಬಡವರು,ಹಿಂದುಳಿದವರು,ಸಾಮಾನ್ಯ ಜನರು ಬಲಿಯಾಗುತ್ತಿದ್ದಾರೆ. ಹಾಗಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಕಲ್ಯಾಣ ಕರ್ನಾಟಕದ ಭಾಗದ ಹಲವು ಜಿಲ್ಲೆಗಳಲ್ಲಿ ಈ ಜಾಥಾವು ಆಯೋಜಿಸಲಲಾಗಿದೆ.ಅಕ್ರಮ ಮದ್ಯ ಮಾರಾಟವನ್ನು ಸ್ಥಳೀಯ ಸಂಸ್ಥೆಗಳ ಮತ್ತು ಇಲಾಖೆಗಳ ಅಧಿಕಾರಿಗಳ(ಗ್ರಾಮ ಪಂಚಾಯತಿ ಅಭಿವೃದಿ ಅಧಿಕಾರಿಗಳು,ಪೊಲೀಸ್ ಇಲಾಖೆ,ಅಭಕಾರಿ ಇಲಾಖೆ)ವಿಶೇಷ ಕಾರ್ಯವು ಪ್ರಮುಖವಾಗಿದ್ದು ಅಧಿಕಾರಿಗಳು ಅಕ್ರಮ ಮದ್ಯ ಮಾರಾಟ ತಡೆಯುವಲ್ಲಿ ನಿರ್ಭೀತಿಯಿಂದ ಕೆಲಸ ಮಾಡಬೇಕೆಂದು ತಿಳಿಸಿ ಅಕ್ರಮದ ಮದ್ಯ ಮಾರಾಟ ಕರ್ನಾಟಕದಲ್ಲಿ ಸಂಪೂರ್ಣ ನಿಷೇಧಿಸುವಂತೆ ಒತ್ತಾಯಿಸಿ ಅಭಕಾರಿ ಇಲಾಖೆಯ ಮುಖ್ಯಸ್ಥರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಯಿತು.
ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಶ್ರೀಮತಿ ಆಶಾ ವೀರೇಶ್ ಮಾತನಾಡಿ ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯದಿಂದಾಗಿ ಹಾಗೂ ಜನಪ್ರತಿನಿಧಿಗಳ ಸರ್ಕಾರದ ಕಾನೂನು ನಿಯಮಗಳ ಉಲ್ಲಂಘನೆ ಯಿಂದಾಗಿ ಹಳ್ಳಿ ಹಳ್ಳಿಗಳಲ್ಲಿ, ಅಂಗಡಿಯ ಮುಂಗಟ್ಟುಗಳಲ್ಲಿ, ಹಾದಿ ಬೀದಿಗಳಲ್ಲಿ, ಅಕ್ರಮವಾಗಿ ಸರಾಯಿ ಸಿಗುವಂತಾಗಿದ್ದು ಇದರಿಂದ ಸಾರ್ವಜನಿಕರು ಮದ್ಯ ವ್ಯಸನಿಗಳಾಗುತ್ತಿದ್ದು ಇದರಿಂದ ಸಾಮಾಜಿಕ,ಆರ್ಥಿಕ,ಕೌಟಂಬಿಕ ಸಮಸ್ಯೆಗಳಿಂದ ಖಿನ್ನತೆಗೆ ಒಳಗಾಗಿ ಜೀವನವನ್ನೇ ಹಾಳುಮಾಡಿಕೊಳ್ಳುತ್ತಿರುವ ಪ್ರಸಂಗಗಳು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಬಹುದಾಗಿದೆ.ಕೆ ಆರ್ ಎಸ್ ಪಕ್ಷವು ಮಹಿಳಾ ಘಟಕದ ನೇತೃತ್ವದಲ್ಲಿ ರಾಜ್ಯದಲ್ಲಿ JCB ಪಕ್ಷಗಳು ಮಾಡದೇ ಇರುವ ವಿಶೇಷವಾದ ಕಾರ್ಯಕ್ರಮಗಳನ್ನು ಮತ್ತು ಅಭಿಯಾನಗಳನ್ನು ಹಮ್ಮಿಕೊಳ್ಳುವ ಮೂಲಕ ಜನರ ಜಾಗೃತಿ ಮಾಡಿ ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಮದ್ಯ ಮುಕ್ತ ಕರ್ನಾಟಕದ ನಿರ್ಮಾಣದ ಕಾರ್ಯಕ್ಕೆ ಮುಂದಾಗುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮದ್ಯಪಾನ ನಿಷೇಧ ಆಂದೋಲನದ ಮುಖ್ಯಸ್ಥೆ ಶ್ರೀಮತಿ ಮೋಕ್ಷಮ್ಮ ,ರಾಜ್ಯ ಕಾರ್ಯದರ್ಶಿಗಳಾದ ರಮೇಶ್ ಗೌಡ ಮಹಿಳಾ ಘಟಕದ ಉಪಾಧ್ಯಕ್ಷೆ ಶಕುಂತಲಾ,ಎಸ್ಸಿ ಎಸ್ಟಿ ಘಟಕದ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ಮಹಾದೇವಿ, ಎಸ್ಸಿ ಎಸ್ಟಿ ಘಟಕದ ರಾಜ್ಯ ಕಾರ್ಯದರ್ಶಿ ಬಸವ ಪ್ರಭು, ರಾಜ್ಯ ರೈತ ಘಟಕದ ಕಾರ್ಯದರ್ಶಿಗಳಾದ ಶಿವರಾಜ ಕಪಗಲ್, ನಿರುಪಾದಿ ಕೆ ಗೋಮರ್ಸಿ,ಯುವ ಘಟಕದ ಕಾರ್ಯದರ್ಶಿ ದ್ಯಾವಣ್ಣ ಪುಲದಿನ್ನಿ,ರಾಯಚೂರು ಜಿಲ್ಲಾಧ್ಯಕ್ಷರಾದ ರಾಘವೇಂದ್ರ ಕಂಡೂರು,ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್, ಕಾರ್ಯದರ್ಶಿಗಳಾದ ವಿಶ್ವನಾಥ್ ನಾಯ್ಡು, ಅಲ್ಲಾಸಾಬ್,ಶಂಕರ ಗೌಡ,ಸೇರಿದಂತೆ ಗಂಗಪ್ಪ ಕಬ್ಬೇರ್,ಮಹೇಶ್,ವೀರೇಶ್ ಕೋಟೆ,ನಾಗಲಕ್ಷ್ಮಿ,ಮೇರಿ,ಮಮತಾ,ಮಂಜುಳ, ರೇಖಾ, ತರಂಗಿಣಿ ಸೇರಿದಂತೆ ನೂರಾರು ಜನ ಭಾಗವಹಿಸಿದ್ದರು.
ವರದಿ : ರಾಜು ಮುಂಡೆ




