ವಿಜಯಪುರ : ಫೆಬ್ರವರಿ 4 ರಂದು ಬಸವನಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ ನಡೆಯಲಿದೆ ಎಂದು ಕೆ.ಎಸ್ ಈಶ್ವರಪ್ಪ ತಿಳಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1008 ಸಾಧು ಸಂತರ ಪಾದ ಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ ನಡೆಯಲಿದೆ.
ಒಂದು ಲಕ್ಷ ಜನ ಸೇರಿಸಿ ಕಾರ್ಯಕ್ರಮ ಮಾಡುತ್ತೇವೆ. ಜನವರಿ 12 ರಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಬ್ರಿಗೇಡ್ ಬಗ್ಗೆ ಜಾಗೃತಿ ಮೂಡಿಸುತ್ತೇವೆ. ಹಿಂದೂ ಸಮಾಜದ ಪರವಾಗಿ ಬ್ರಿಗೇಡ್ ಹೋರಾಟ ಮಾಡಲಿದೆ. ಹಿಂದುಳಿದ ವರ್ಗದ ಸ್ವಾಮೀಜಿಗಳ ಪರ ಬ್ರಿಗೇಡ್ ಕೆಲಸ ಮಾಡಲಿದೆ.
ನಾನು ರಾಜಕಾರಣದ ಜೊತೆಗೆ ಸಾಧು ಸಂತರ ಸೇವೆ ಮಾಡಿದ್ದೇನೆ. ಈ ಹಿಂದೆ ಮಠ ಮಂದಿರಗಳಿಗೆ ಹಣ ನೀಡುವಂತೆ ಮಾಡಿದ್ದು ನಾನೇ. ಹೀಗಾಗಿ ನಾನು ಧಾರ್ಮಿಕ ಕೆಲಸ ಮಾಡುತ್ತಿದ್ದೇನೆ ಎಂದರು.