ಬೆಂಗಳೂರು: ಕುಡಚಿ ಕಾಂಗ್ರೆಸ್ ಶಾಸಕ ಮಹೇಂದ್ರ ತಮ್ಮಣ್ಣನವರು ತಮ್ಮ ನವಜಾತ ಮಗುವಿಗೆ ನಾಮಕರಣ ಮಾಡಿದ್ದಾರೆ. ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಗುವಿಗೆ ‘ಶಿವಕುಮಾರ್’ ಎಂದು ನಾಮಕರಣ ಮಾಡಿದ್ದಾರೆ.
ಈ ಸಂಭ್ರಮದ ಡಿ.ಕೆ.ಶಿವಕುಮಾರ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯ ಮೂಲಕ ಹಂಚಿಕೊಂಡಿದ್ದು, ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ! ನನ್ನ ಗೃಹಕಚೇರಿಯಲ್ಲಿ ಇಂದು ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣನವರ ಮಗನಿಗೆ ‘ಶಿವಕುಮಾರ್’ ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು’ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.
ತಮ್ಮ ಹೆಸರನ್ನು ಮಗುವಿಗಿಡಲು ಶಾಸಕರು ತೆಗೆದುಕೊಂಡ ನಿರ್ಧಾರಕ್ಕೆ ಧನ್ಯವಾದ ತಿಳಿಸಿದ ಶಿವಕುಮಾರ್, ಮುಂದಿನ ದಿನಗಳಲ್ಲಿ ಈ ಮುದ್ದಾದ ಮಗು ನನಗಿಂತಲೂ ಎತ್ತರಕ್ಕೆ ಬೆಳೆಯಲಿ, ತಂದೆ-ತಾಯಿಗಳಿಗೆ ಒಳ್ಳೆಯ ಹೆಸರು ತರುವಂತಾಗಲಿ ಎಂದು ಶುಭಹಾರೈಸಿದ್ದಾರೆ.




